News Kannada
Thursday, February 02 2023

ತಮಿಳುನಾಡು

ಪಿ ಚಿದಂಬರಂ ಮನೆ, ಕಚೇರಿಗಳ ಮೇಲೆ ಸಿಬಿಐ ದಾಳಿ

Photo Credit :

ಚೆನ್ನೈ: ಮಾಜಿ ಕೇಂದ್ರ ಸಚಿವ ಮತ್ತು ಕಾಂಗ್ರೆಸ್ ಮುಖಂಡ ಪಿ. ಚಿದಂಬರಂ ಅವರ ನಿವಾಸ, ಕಚೇರಿಗಳ ಮೇಲೆ ಸಿಬಿಐ ದಾಳಿ ನಡೆಸಿದೆ. ದೆಹಲಿ, ಮುಂಬೈ, ಚೆನ್ನೈ, ಶಿವಗಂಗಾ ಸೇರಿದಂತೆ ದೇಶದ 7 ಸ್ಥಳಗಳಲ್ಲಿ ಸಿಬಿಐ ಅಧಿಕಾರಿಗಳು ಶೋಧ ನಡೆಸಿದ್ದಾರೆ ಎಂದು ಎಎನ್‌ಐ ಟ್ವೀಟ್ ಮಾಡಿದೆ.

ಚಿದಂಬರಂ ಪುತ್ರ ಕಾರ್ತಿ ಚಿದಂಬರಂ ಅವರಿಗೆ ಸಂಬಂಧಿಸಿದ ಪ್ರಕರಣವೊಂದರ ಸಂಬಂಧ ಈ ದಾಳಿ ನಡೆದಿದೆ ಎಂದು ತಿಳಿದುಬಂದಿದೆ. ಸಿಬಿಐ ದಾಳಿಯನ್ನು ಕಾರ್ತಿ ಚಿದಂಬರಂ ಕಚೇರಿ ಖಚಿತಪಡಿಸಿದೆ.

ಮೂಲಗಳ ಪ್ರಕಾರ, ಕೇಂದ್ರೀಯ ತನಿಖಾ ಸಂಸ್ಥೆ(ಸಿಬಿಐ)ಯು 2010-14ರ ನಡುವೆ ವಿದೇಶಕ್ಕೆ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಕಾರ್ತಿ ಚಿದಂಬರಂ ಅವರ ವಿರುದ್ಧ ಹೊಸ ಪ್ರಕರಣ ದಾಖಲಿಸಿದೆ.

ಈ ಕುರಿತಂತೆ ಟ್ವೀಟ್ ಮಾಡಿರುವ ಕಾರ್ತಿ ಚಿದಂಬರಂ, ನನ್ನ ಮೇಲೆ ಎಷ್ಟು ಬಾರಿ ದಾಳಿ ನಡೆದಿದೆ ಎಂಬುದರ ಲೆಕ್ಕವೇ ಸಿಗುತ್ತಿಲ್ಲ. ಈ ಬಗ್ಗೆ ದಾಖಲಾತಿ ಇಡಬೇಕು ಎಂದಿದ್ದಾರೆ.

See also  ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12790
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು