News Kannada
Tuesday, February 07 2023

ತಮಿಳುನಾಡು

ಇಂದು ಚೆನ್ನೈಗೆ ಪ್ರಧಾನಿ ಮೋದಿ ಭೇಟಿ

Photo Credit :

ಚೆನ್ನೈ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಚೆನ್ನೈಗೆ ಭೇಟಿ ನೀಡಲಿದ್ದಾರೆ. ನಗರದ ಜವಾಹರಲಾಲ್ ನೆಹರು ಕ್ರೀಡಾಂಗಣದಲ್ಲಿ ನಿಗದಿಯಾಗಿರುವ ಕಾರ್ಯಕ್ರಮದಲ್ಲಿ ಮೋದಿ ಅವರು ₹ 31,500 ಕೋಟಿ ಮೊತ್ತದ 11 ಯೋಜನೆಗಳಿಗೆ ಶಿಲಾನ್ಯಾಸ ನೆರವೇರಿಸಲಿದ್ದಾರೆ.

ಮೋದಿ ಭೇಟಿಗೆ ಮೊದಲು ನಗರದಾದ್ಯಂತ ಭದ್ರತೆ ಹೆಚ್ಚಿಸಲಾಗಿದೆ. 22,000 ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದ್ದು, ಐದು ಹಂತಗಳ ಭದ್ರತಾ ವ್ಯವಸ್ಥೆಯನ್ನು ರೂಪಿಸಲಾಗಿದೆ. ಪ್ರಧಾನಿ ಕಾರ್ಯಕ್ರಮದಲ್ಲಿ ಯಾವುದೇ ಅನಪೇಕ್ಷಿತ ಬೆಳವಣಿಗೆಗಳು ಆಗದಂತೆ ತಡೆಯಲು ಪೊಲೀಸರು ಅಗತ್ಯ ಕ್ರಮ ತೆಗೆದುಕೊಂಡಿದ್ದಾರೆ. ಪೊಲೀಸ್ ಆಯುಕ್ತ ಶಂಕರ್ ಜೀವಾಳ್ ಭದ್ರತೆಯ ಉಸ್ತುವಾರಿ ಹೊತ್ತಿದ್ದಾರೆ. ಎಂಟು ಮಂದಿ ಜಂಟಿ ಆಯುಕ್ತರು (ಜೆಸಿ), 29 ಡೆಪ್ಯುಟಿ ಇನ್​ಸ್ಪೆಕ್ಟರ್ ಜನರಲ್ (ಡಿಐಜಿ), ಎಸ್​ಪಿಗಳು ಮತ್ತು ಇತರ ಹಿರಿಯ ಅಧಿಕಾರಿಗಳನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ.

ಚೆನ್ನೈನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಜವಾಹರಲಾಲ್ ಹೆಹರು ಒಳಾಂಗಣ ಕ್ರೀಡಾಂಗಣಕ್ಕೆ ತೆರಳುವ ಮಾರ್ಗದಲ್ಲಿ ಭದ್ರತೆ ಹೆಚ್ಚಿಸಲಾಗಿದ್ದು, ಕಟ್ಟುನಿಟ್ಟಿನ ತಪಾಸಣೆಗೆ ಕ್ರಮ ತೆಗೆದುಕೊಳ್ಳಲಾಗಿದೆ. ರೈಲು ನಿಲ್ದಾಣ, ಬಸ್​ ನಿಲ್ದಾಣಗಳಲ್ಲಿಯೂ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಗ್ರೇಟರ್ ಚೆನ್ನೈ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಡ್ರೋನ್ ಮತ್ತು ಮಾನವರಹಿತ ವೈಮಾನಿಕ ಉಪಕರಣಗಳ ಹಾರಾಟವನ್ನು ನಿಷೇಧಿಸಲಾಗಿದೆ.

See also  ಬೆಂಕಿಪೊಟ್ಟಣದ ಬೆಲೆ 14 ವರ್ಷದ ನಂತರ ಏರಿಸಿದ ಕಂಪನಿಗಳು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು