ಚೆನ್ನೈ: ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯಲ್ಲಿ ಗುರುವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೂರು ತಿಂಗಳ ಮಗು ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ.
ಸಾಲೂರು ಗ್ರಾಮದಿಂದ ಆಂಧ್ರಪ್ರದೇಶದ ದೇವಕೋಟಾಕ್ಕೆ ಕೃಷಿ ಕೆಲಸಕ್ಕಾಗಿ 12 ಜನರನ್ನು ಕರೆದೊಯ್ಯುತ್ತಿದ್ದ ಟ್ರ್ಯಾಕ್ಟರ್ ಗೆ ಬೆಂಗಳೂರಿನಿಂದ ಬರುತ್ತಿದ್ದ ಪ್ಯಾಸೆಂಜರ್ ಬಸ್ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ.
ಗಾಯಗೊಂಡವರಲ್ಲಿ ಕೆಲವರನ್ನು ಕೃಷ್ಣಗಿರಿ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.