News Kannada
Friday, October 07 2022

ತೆಲಂಗಾಣ

ಮೇ 6 ಮತ್ತು7ರಂದು ರಾಹುಲ್​ ಗಾಂಧಿ ತೆಲಂಗಾಣಕ್ಕೆ ಭೇಟಿ; ಉಸ್ಮಾನಿಯಾ ವಿವಿಗೆ ನೋ ಎಂಟ್ರಿ - 1 min read

Cong will continue to raise corruption issue: Rahul Gandhi in K'taka
Photo Credit : IANS

ಹೈದರಾಬಾದ್: ತೆಲಂಗಾಣಕ್ಕೆ ಎರಡು ದಿನಗಳ ಭೇಟಿ ನೀಡಲಿರುವ ಕಾಂಗ್ರೆಸ್​ ನಾಯಕ, ಸಂಸದ ರಾಹುಲ್​ ಗಾಂಧಿಗೆ ಭಾರಿ ಮುಖಭಂಗವಾಗಿದೆ. ಇಲ್ಲಿಯ ಉಸ್ಮಾನಿಯಾ ವಿಶ್ವವಿದ್ಯಾನಿಲಯ ಕ್ಯಾಂಪಸ್‍ನಲ್ಲಿ ಇವರಿಗೆ ಪ್ರವೇಶ ನಿರಾಕರಿಸಲಾಗಿದೆ.

ರಾಹುಲ್​ ಗಾಂಧಿಯವರು ಮೇ 6 ಮತ್ತು 7 ರಂದು ತೆಲಂಗಾಣಕ್ಕೆ ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಹೈದರಾಬಾದ್​ನಲ್ಲಿರುವ ಉಸ್ಮಾನಿಯಾ ವಿಶ್ವವಿದ್ಯಾನಿಲಯದ ಕ್ಯಾಂಪಸ್‍ನಲ್ಲಿ ರಾಜಕೀಯೇತರ ಸಭೆಯನ್ನು ನಡೆಸಲಿದ್ದಾರೆ ಎನ್ನಲಾಗಿತ್ತು. ಆದರೆ ಅವರಿಗೆ ವಿಶ್ವವಿದ್ಯಾಲಯದಲ್ಲಿ ಪ್ರವೇಶ ನೀಡಲಿಲ್ಲ. ಇದಕ್ಕೆ ಕಾರಣ ನೀಡಿರುವ ವಿಶ್ವವಿದ್ಯಾಲಯದ ಕುಲಪತಿಗಳು, ಕ್ಯಾಂಪಸ್‌ನಲ್ಲಿ ಯಾವುದೇ ರಾಜಕೀಯ ಚಟುವಟಿಕೆಗೆ ಅವಕಾಶವಿಲ್ಲ ಎಂದಿದ್ದಾರೆ.

ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ನೇತೃತ್ವದ ರಾಜ್ಯ ಸರ್ಕಾರವು ರಾಹುಲ್ ಗಾಂಧಿ ಭೇಟಿ ನೀಡುವುದನ್ನು ತಡೆಯುವಂತೆ ಸಂಸ್ಥೆಗೆ ಒತ್ತಾಯಿಸುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದ್ದರೆ, ರಾಹುಲ್ ಗಾಂಧಿ ಅವರ ಭೇಟಿಗೆ ಅವಕಾಶ ನೀಡುವಂತೆ ವಿಶ್ವವಿದ್ಯಾಲಯಕ್ಕೆ ನಿರ್ದೇಶನ ನೀಡಬೇಕೆಂದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಕುರಿತು ಹೈಕೋರ್ಟ್​ಗೂ ಅರ್ಜಿ ಸಲ್ಲಿಕೆಯಾಗಿದೆ ಎಂದು ತಿಳಿದುಬಂದಿದೆ.

ಪ್ರತಿಭಟನಾ ನಿರತ ಎನ್‍ಎಸ್‍ಯುಐ ಸದಸ್ಯರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಸಾರ್ವಜನಿಕ ನೌಕರನ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಕೆಲವರನ್ನು ಬಂಧಿಸಲಾಗಿದೆ. ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಲು ಸರ್ಕಾರ ಅನುಮತಿ ನೀಡದಿದ್ದರೆ ಜೈಲಿನಲ್ಲಿಯೇ ರಾಹುಲ್​ ಗಾಂಧಿ ವಿದ್ಯಾರ್ಥಿಗಳನ್ನು ಭೇಟಿಯಾಗಲಿದ್ದಾರೆ ಎಂದು ತೆಲಂಗಾಣ ಕಾಂಗ್ರೆಸ್​ ಹೇಳಿದೆ.

ರಾಹುಲ್​ ಅವರ ತೆಲಂಗಾಣ ರಾಜ್ಯ ಪ್ರವಾಸದ ನಿಮಿತ್ತ ವಾರಂಗಲ್‌ನಲ್ಲಿ 5 ಲಕ್ಷ ಜನರನ್ನು ಸೇರಿಸಿ ಬೃಹತ್ ಸಮಾವೇಶ ನಡೆಸಲು ಪಕ್ಷ ಸಿದ್ಧತೆ ಮಾಡಿಕೊಂಡಿದೆ.

See also  ಹೈದರಾಬಾದ್ ವಿಮಾನ ನಿಲ್ದಾಣದಲ್ಲಿ 3 ಓಮಿಕ್ರಾನ್ ಕೇಸು ಪತ್ತೆ, ಒಬ್ಬ ನಾಪತ್ತೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು