News Kannada
Thursday, October 06 2022

ತೆಲಂಗಾಣ

ಸಂತ್ರಸ್ತೆಯ ಫೋಟೋ, ವಿಡಿಯೋ ಬಹಿರಂಗ: ಬಿಜೆಪಿ ಶಾಸಕನ ವಿರುದ್ಧ ಎಫ್ಐಆರ್ ದಾಖಲು - 1 min read

8 sovereigns of gold jewellery stolen
Photo Credit :

ಹೈದರಾಬಾದ್: ಸಾಮೂಹಿಕ ಅತ್ಯಾಚಾರಕ್ಕೊಳಗಾದ ಸಂತ್ರಸ್ತೆಯ ಕೆಲವು ಫೋಟೋ ಮತ್ತು ವೀಡಿಯೋ ಬಿಡುಗಡೆ ಮಾಡಿದ್ದಕ್ಕೆ ಬಿಜೆಪಿ ಶಾಸಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ದೂರಿನ ಆಧಾರದ ಮೇಲೆ ಶಾಸಕ ಎಂ.ರಘುನಂದನ್ ರಾವ್ ಅವರು ಫೋಟೋ ಮತ್ತು ವೀಡಿಯೋ ಕ್ಲಿಪ್ ಹಂಚಿಕೊಳ್ಳುವ ಮೂಲಕ ಅಪ್ರಾಪ್ತೆ ಗುರುತನ್ನು ಬಹಿರಂಗಪಡಿಸಿದ್ದಾರೆ.

ಅವರ ವಿರುದ್ಧ ಐಪಿಸಿಯ ಸೆಕ್ಷನ್ 228-ಎ (ನಿರ್ದಿಷ್ಟ ಅಪರಾಧಕ್ಕೆ ಬಲಿಯಾದ ವ್ಯಕ್ತಿಯ ಗುರುತನ್ನು ಬಹಿರಂಗ ಪಡಿಸುವುದು) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಹೈದರಾಬಾದ್ ಗ್ಯಾಂಗ್ ರೇಪ್‍ಗೆ ಸಂಬಂಧಿಸಿದಂತೆ ಜೂನ್ 4 ರಂದು ಎಂ.ರಘುನಂದನ್ ಸುದ್ದಿಗೋಷ್ಠಿ ನಡೆಸಿದ್ದರು. ಎಐಎಂಐಎಂ ಶಾಸಕರೊಬ್ಬರ ಪುತ್ರ ಸಹ ಈ ಗ್ಯಾಂಗ್‍ ರೇಪ್‍ನಲ್ಲಿ ಭಾಗಿಯಾಗಿದ್ದಾನೆ ಎಂದು ಆರೋಪಿಸಿದ್ದರು.

ಹೇಳಿಕೆಯನ್ನು ಸಾಬೀತುಪಡಿಸಲು ತಮ್ಮ ಬಳಿ ಹೆಚ್ಚಿನ ಸಾಕ್ಷಿಗಳಿವೆ ಎಂದು ಹೇಳಿದ್ದರು. ವೀಡಿಯೋದಲ್ಲಿ ಅಪ್ರಾಪ್ತನ ಜೊತೆಗೆ ಸಂತ್ರಸ್ತೆ ಸಹ ಇರುವುದು ಕಂಡುಬಂದಿದೆ. ಅದಕ್ಕೆ ಪ್ರತಿಪಕ್ಷಗಳು ಭಾರೀ ವಿರೋಧ ವ್ಯಕ್ತಪಡಿಸಿತ್ತು.

See also  ಹೈದರಾಬಾದ್: ಪ್ರೇಮ ಪ್ರಸ್ತಾಪ ತಿರಸ್ಕರಿಸಿದ ಮಹಿಳೆಗೆ ಚಾಕುವಿನಿಂದ ಇರಿದ ಘಟನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

1616
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು