News Kannada
Wednesday, October 05 2022

ತೆಲಂಗಾಣ

ಹೈದರಾಬಾದ್: ಕಟ್ಟಡದ ಮೂರನೇ ಮಹಡಿಯಿಂದ ಹಾರಿ ವಿದ್ಯಾರ್ಥಿ ಆತ್ಮಹತ್ಯೆ - 1 min read

One charred to death after bike collides with petrol tanker
Photo Credit : Pexels

ಹೈದರಾಬಾದ್:  ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ.  ತನ್ನ ಯೂಟ್ಯೂಬ್ ಚಾನೆಲ್‌ಗೆ ಚಂದಾದಾರರ ಸಂಖ್ಯೆ ಕಡಿಮೆಯಾಗಿದೆ ಮತ್ತು ವಿಡಿಯೊ ನೋಡುಗರ ಸಂಖ್ಯೆಯಲ್ಲಿ ಇಳಿಕೆಯಾಗಿದೆ ಎಂದು ಈತ ಈ ನಿರ್ಧಾರ ತೆಗೆದುಕೊಂಡಿದ್ದಾನೆಂದು ಹೇಳಲಾಗಿದೆ.

ಈ  ವಿದ್ಯಾರ್ಥಿಗೆ  23 ವರ್ಷದವಾಗಿದ್ದು,  ಗ್ವಾಲಿಯರ್‌ನ ಐಐಐಟಿಎಂನಲ್ಲಿ ವ್ಯಾಸಂಗ ಮಾಡುತ್ತಿದ್ದ. ಹೈದರಾಬಾದ್‌ನ ವಸತಿ ಕಟ್ಟಡವೊಂದರ ಮೂರನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪಾರ್ಟ್‌ಮೆಂಟ್ ಒಂದರಲ್ಲಿ ಇದ್ದುಕೊಂಡು ಆನ್‌ಲೈನ್ ಮೂಲಕ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ, ವಿಡಿಯೊ ಗೇಮ್ ಕುರಿತು ಯೂಟ್ಯೂಬ್‌ಗೆ ವಿಡಿಯೊ ಅಪ್‌ಲೋಡ್ ಮಾಡುತ್ತಿದ್ದ ಎಂದು ಪೊಲೀಸರು ಹೇಳಿದ್ದಾರೆ.

ಯೂಟ್ಯೂಬ್ ಚಾನೆಲ್ ನೋಡುಗರ ಸಂಖ್ಯೆಯಲ್ಲಿ ಇಳಿಕೆಯಾಗಿರುವುದು ಮತ್ತು ಚಂದಾದಾರರ ಸಂಖ್ಯೆ ಕಡಿಮೆ ಇರುವುದರಿಂದ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವಿದ್ಯಾರ್ಥಿ ಡೆತ್‌ನೋಟ್ ಬರೆದಿದ್ದಾನೆ. ಅಲ್ಲದೆ, ಭವಿಷ್ಯ ಮತ್ತು ಉದ್ಯೋಗದ ವಿಚಾರದಲ್ಲಿ ಪಾಲಕರು ಸರಿಯಾಗಿ ನಿರ್ದೇಶನ ಮಾಡುತ್ತಿಲ್ಲ ಎಂದು ವಿದ್ಯಾರ್ಥಿ ಡೆತ್‌ನೋಟ್‌ನಲ್ಲಿ ಆರೋಪಿಸಿದ್ದಾನೆ.

See also  ನಕ್ಷತ್ರ ಆಮೆಗಳ ಕಳ್ಳಸಾಗಣಿಕೆ, ಓರ್ವನ ಬಂಧನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು