News Kannada
Sunday, November 27 2022

ತೆಲಂಗಾಣ

ಹೈದರಾಬಾದ್: ತೆಲಂಗಾಣದಲ್ಲಿ ಎರಡು ರಸ್ತೆ ಅಪಘಾತ, 7 ಸಾವು - 1 min read

One killed, 7 seriously injured in road accident in Dharmasthala
Photo Credit : Pixabay

ಹೈದರಾಬಾದ್: ತೆಲಂಗಾಣದಲ್ಲಿ ಸೋಮವಾರ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಏಳು ಮಂದಿ ಮೃತಪಟ್ಟಿದ್ದು, 10 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಅದಿಲಾಬಾದ್ ಜಿಲ್ಲೆಯಲ್ಲಿ ಮುಂಜಾನೆ ಕಂಟೈನರ್ ಟ್ರಕ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ.

ಗುಡಿಹತ್ತನೂರು ಮಂಡಲದ ಸೀತಗೊಂಡಿ ಬಳಿಯ ರಾಷ್ಟ್ರೀಯ ಹೆದ್ದಾರಿ ೪೪ ರಲ್ಲಿ ಈ ಅಪಘಾತ ಸಂಭವಿಸಿದೆ.ಐದು ಜನರೊಂದಿಗೆ ಕಾರು ಹೈದರಾಬಾದ್ ನಿಂದ ಅದಿಲಾಬಾದ್ ಪಟ್ಟಣಕ್ಕೆ ಹೋಗುತ್ತಿತ್ತು. ಮೃತರಲ್ಲಿ ಒಂದೇ ಕುಟುಂಬದ ಮೂವರು ಸದಸ್ಯರು ಮತ್ತು ಚಾಲಕ ಸೇರಿದ್ದಾರೆ.

ಮೃತರನ್ನು ಸೈಯದ್ ರಫತುಲ್ಲಾ ಹಶ್ಮಿ, ವಜಾತ್ ಹಶ್ಮಿ, ಸಬಿಹಾ ಮತ್ತು ಚಾಲಕ ಶಂಶು ಎಂದು ಗುರುತಿಸಲಾಗಿದೆ. ಗಾಯಗೊಂಡಿರುವ ಮತ್ತೊಬ್ಬ ಯುವತಿಯನ್ನು ಅದಿಲಾಬಾದ್ ರಾಜೀವ್ ಗಾಂಧಿ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ರಿಮ್ಸ್) ಗೆ ಸ್ಥಳಾಂತರಿಸಲಾಗಿದೆ.

ಎರಡನೇ ಅಪಘಾತದಲ್ಲಿ, ಹೈದರಾಬಾದ್ ಬಳಿಯ ಮೆಡ್ಚಲ್ ಮಲ್ಕಾಜ್ಗಿರಿ ಜಿಲ್ಲೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ ಮತ್ತು ಒಂಬತ್ತು ಜನರು ಗಾಯಗೊಂಡಿದ್ದಾರೆ.

ಅವರು ಪ್ರಯಾಣಿಸುತ್ತಿದ್ದ ಟೆಂಪೊ ಕಂದಕೋಯ ಬಳಿ ಟ್ರಕ್ ಗೆ ಡಿಕ್ಕಿ ಹೊಡೆದಾಗ ಈ ಅಪಘಾತ ಸಂಭವಿಸಿದೆ.

ಗಾಯಗೊಂಡವರನ್ನು ಸಿಕಂದರಾಬಾದ್ ಯಶೋದಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ, ಅಲ್ಲಿ ಅವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ. ಸಂತ್ರಸ್ತರು ನೆರೆಯ ಆಂಧ್ರಪ್ರದೇಶದ ಶ್ರೀಶೈಲಂ ದೇವಾಲಯದಲ್ಲಿ ದರ್ಶನ ಪಡೆದು ಹಿಂದಿರುಗುತ್ತಿದ್ದರು.

See also  ಹೈದರಾಬಾದ್: ಬಿಜೆಪಿ ಕಾರ್ಯಕರ್ತನ ಮನೆಗೆ ಭೇಟಿ ನೀಡಿದ ಅಮಿತ್ ಶಾ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

30409

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು