News Kannada
Wednesday, November 30 2022

ತೆಲಂಗಾಣ

ಹೈದರಾಬಾದ್: ತೆಲಂಗಾಣದಲ್ಲಿ ಟ್ರ್ಯಾಕ್ಟರ್ ಗೆ ಬಸ್ ಡಿಕ್ಕಿ, 3 ಸಾವು - 1 min read

Four killed in road accident in Udhampur
Photo Credit : Pixabay

ಹೈದರಾಬಾದ್: ತೆಲಂಗಾಣದ ವಾನಪರ್ತಿ ಜಿಲ್ಲೆಯ ಹೈದರಾಬಾದ್-ಬೆಂಗಳೂರು ಹೆದ್ದಾರಿಯಲ್ಲಿ ಸೋಮವಾರ ಮುಂಜಾನೆ ಟ್ರ್ಯಾಕ್ಟರ್ ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ.

ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಎಸ್ಆರ್ಟಿಸಿ) ಗರುಡ ಬಸ್ ಹೈದರಾಬಾದ್ ನಿಂದ ಬೆಂಗಳೂರಿಗೆ ತೆರಳುತ್ತಿದ್ದು, ಕೊಟ್ಟಕೋಟಾ ಮಂಡಲದ ಮುಮ್ಮಲಪಲ್ಲಿ ಬಳಿ ಹಿಂದಿನಿಂದ ಕಬ್ಬು ತುಂಬಿದ ಟ್ರ್ಯಾಕ್ಟರ್ ಗೆ ಡಿಕ್ಕಿ ಹೊಡೆದಿದೆ.

ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಒಬ್ಬರು ವಾನಪರ್ತಿಯ ಸರ್ಕಾರಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಪೊಲೀಸರ ಪ್ರಕಾರ, ಬಸ್ ಚಾಲಕ, ಕ್ಲೀನರ್ ಮತ್ತು ಒಬ್ಬ ಪ್ರಯಾಣಿಕ ಸಾವನ್ನಪ್ಪಿದ್ದು, ಇತರ 15 ಜನರು ಗಾಯಗೊಂಡಿದ್ದಾರೆ.

ಮೃತರನ್ನು ಆಂಜನೇಯುಲು (42), ಸಂದೀಪ್ (35) ಮತ್ತು ಶಿವಣ್ಣ (56) ಎಂದು ಗುರುತಿಸಲಾಗಿದೆ. ಗಾಯಾಳುಗಳು ವಾನಪರ್ತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಹೈದರಾಬಾದ್ನ ಮಿಯಾಪುರ್ ಡಿಪೋಗೆ ಸೇರಿದ ಬಸ್ನಲ್ಲಿ ಒಟ್ಟು ೪೮ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು.

 

See also  ಮಂಗಳೂರು: ಮಹಿಳಾ ಪ್ರಯಾಣಿಕರಿಗೆ ಲೈಂಗಿಕ ಕಿರುಕುಳ ನೀಡಿದ ಬಸ್ ಕ್ಲೀನರ್ ನ ಬಂಧನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

30409

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು