ಜಗ್ತಿಯಾಲ್: ತೆಲಂಗಾಣದ ಜಗ್ತಿಯಾಲ್‌ನಲ್ಲಿ ಚುನಾವಣೆ ಸಂಬಂಧಿಸಿ ಕೇಂದ್ರ ಗೃಹಸಚಿವ ಅಮಿತ್ ಶಾ, ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಮತ್ತು ಬಿಆರ್‌ಎಸ್ ಮುಖ್ಯಸ್ಥ ಕೆ ಚಂದ್ರಶೇಖರ ರಾವ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಓವೈಸಿ ತುಷ್ಟೀಕರಣ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದ ಶಾ, ತೆಲಂಗಾಣದಲ್ಲಿ ಸರ್ಕಾರಿ ಉದ್ಯೋಗಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಮುಸ್ಲಿಂ ಸಮುದಾಯಕ್ಕೆ 4 ಪ್ರತಿಶತ ಮೀಸಲಾತಿಯನ್ನು ತಮ್ಮ ಪಕ್ಷ ತೆಗೆದುಹಾಕುತ್ತದೆ ಎಂದು ಹೇಳಿದ್ದಾರೆ.
ನಮ್ಮ ಸರ್ಕಾರ ರಚನೆಯಾದ ತಕ್ಷಣ ನಾವು 4% ಮುಸ್ಲಿಂ ಮೀಸಲಾತಿಯನ್ನು ತೆಗೆದುಹಾಕುತ್ತೇವೆ ಮತ್ತು ಅದನ್ನು ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗೆ ಹಂಚುತ್ತೇವೆ ಎಂದು ನಾವು ನಿರ್ಧರಿಸಿದ್ದೇವೆ. ಕೆಸಿಆರ್ ಓವೈಸಿಗೆ ಹೆದರಿ ಹೈದರಾಬಾದ್ ವಿಮೋಚನಾ ದಿನವನ್ನು ಆಚರಿಸುವುದಿಲ್ಲ. ಆದರೆ ನಾವು ಓವೈಸಿಗೆ ಹೆದರುವುದಿಲ್ಲ. ಹೈದರಾಬಾದ್ ವಿಮೋಚನಾ ದಿನವನ್ನು ರಾಜ್ಯ ದಿನವನ್ನಾಗಿ ಆಚರಿಸುತ್ತೇವೆ ಎಂದು ಹೇಳಿದ್ದಾರೆ.
Heartfelt thanks to the people of Telangana for this grand display of affection in the Uppal roadshow held today. pic.twitter.com/3guQe1GOzR
— Amit Shah (@AmitShah) November 20, 2023