NewsKarnataka
Tuesday, December 07 2021

ತ್ರಿಪುರ

ತ್ರಿಪುರಾ ಮುಖ್ಯ ಮಂತ್ರಿಗಳ ಕೊಲೆಗೆ ಯತ್ನ ; ಮೂವರ ಬಂಧನ

ಅಗರ್ತಲಾ: ತ್ರಿಪುರ ಮುಖ್ಯಮಂತ್ರಿ ವಿಪ್ಲವ್‌ ಕುಮಾರ್‌ ದೇವ್‌ ಅವರನ್ನು ಕೊಲೆ ಮಾಡಲು ಯತ್ನಿಸಿದ ಆರೋಪದ ಮೇಲೆ ಮೂವರನ್ನು ಬಂಧಿಸಿರುವುದಾಗಿ ಪೋಲೀಸರು ತಿಳಿಸಿದ್ದಾರೆ.
ಮುಖ್ಯಮಂತ್ರಿ ಅವರು ತಮ್ಮ ಅಧಿಕೃತ ನಿವಾಸದ ಸಮೀಪ ಗುರುವಾರ ಸಂಜೆ ವಾಯುವಿಹಾರ ಮಾಡುತ್ತಿದ್ದಾಗ, ಈ ಮೂವರು ಭದ್ರತೆಯನ್ನು ಭೇದಿಸಿ, ಮುಖ್ಯಮಂತ್ರಿ ಅವರ ಮೇಲೆ ಕಾರು ಹತ್ತಿಸಲು ಪ್ರಯತ್ನಿಸಿದರು. ಈ ವೇಳೆ ಮುಖ್ಯಮಂತ್ರಿಯವರು ಪಕ್ಕಕ್ಕೆ ಜಿಗಿದರು. ಈ ಘಟನೆಯಲ್ಲಿ ಭದ್ರತಾ ಸಿಬ್ಬಂದಿಗೆ ಸಣ್ಣ ಪುಟ್ಟ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಮುಖ್ಯಮಂತ್ರಿ ಭದ್ರತೆಗಾಗಿ ನಿಯೋಜಿಸಿದ್ದ ಸಿಬ್ಬಂದಿಯು ಈ ಕಾರನ್ನು ಅಡ್ಡಗಟ್ಟಲು ಪ್ರಯತ್ನಿಸಿದರೂ, ಪ್ರಯೋಜನವಾಗಿಲ್ಲ. ಈ ವೇಳೆ ಆರೋಪಿಗಳು ಪರಾರಿಯಾದರು. ನಂತರ ಈ ಮೂವರನ್ನು ಗುರುವಾರ ತಡರಾತ್ರಿ ಕೆರ್ಚೌಮಹಾನಿಯಲ್ಲಿ ಪೊಲೀಸರು ಬಂಧಿಸಿದ್ದು, ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಈ ಮೂವರು 20ರ ಆಸುಪಾಸಿನ ಯುವಕರು ಎನ್ನಲಾಗಿದ್ದು ಯಾವುದಾದರೂ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದಾರೆಯೇ ಎಂದು ಪೋಲೀಸರು ತನಿಖೆ ನಡೆಸುತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

Leave a Reply

Your email address will not be published. Required fields are marked *

Subscribe to our Brand New YouTube Channel

Subscribe Newsletter

Get latest news karnataka updates on your email.

error: Content is protected !!