News Kannada
Friday, February 23 2024
ದೆಹಲಿ

ಸಲಿಂಗಕಾಮ, ವ್ಯಭಿಚಾರ ಸೇರಿಸುವ ಶಿಫಾರಸಿಗೆ ಕೇಂದ್ರ ಕ್ಯಾಬಿನೆಟ್‌ ಅಸಮ್ಮತಿ

ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಹಳೆಯ ವಸಾಹತುಶಾಹಿ ಪೂರ್ವ ಕ್ರಿಮಿನಲ್ ಕಾನೂನುಗಳನ್ನು ಬದಲಿಸಲು ಸಿದ್ಧವಾಗಿರುವ ಕ್ರಿಮಿನಲ್ ಕಾನೂನು ತಿದ್ದುಪಡಿ ಮಸೂದೆಗಳನ್ನು ಮಂಡಿಸಲು ಕೇಂದ್ರ ಸಂಪುಟವು ಗೃಹ ಸಚಿವ ಅಮಿತ್ ಶಾ ಅವರಿಗೆ ಅನುಮತಿ ನೀಡಿದೆ ಎಂದು ತಿಳಿದುಬಂದಿದೆ. ಆದ್ರೆ ಗೃಹ ವ್ಯವಹಾರಗಳ ಸಂಸದೀಯ ಸ್ಥಾಯಿ ಸಮಿತಿಯು ಶಿಫಾರಸು ಮಾಡಿದ 2 ಸಲಹೆಗಳಿಗೆ ಪ್ರಧಾನಿ ನರೇಂದ್ರ ಮೋದಿ , ಅವರ ಕಚೇರಿ ಹಾಗೂ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನಿರಾಕರಿಸಿದೆ
Photo Credit : News Kannada

ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಹಳೆಯ ವಸಾಹತುಶಾಹಿ ಪೂರ್ವ ಕ್ರಿಮಿನಲ್ ಕಾನೂನುಗಳನ್ನು ಬದಲಿಸಲು ಸಿದ್ಧವಾಗಿರುವ ಕ್ರಿಮಿನಲ್ ಕಾನೂನು ತಿದ್ದುಪಡಿ ಮಸೂದೆಗಳನ್ನು ಮಂಡಿಸಲು ಕೇಂದ್ರ ಸಂಪುಟವು ಗೃಹ ಸಚಿವ ಅಮಿತ್ ಶಾ ಅವರಿಗೆ ಅನುಮತಿ ನೀಡಿದೆ ಎಂದು ತಿಳಿದುಬಂದಿದೆ. ಆದ್ರೆ ಗೃಹ ವ್ಯವಹಾರಗಳ ಸಂಸದೀಯ ಸ್ಥಾಯಿ ಸಮಿತಿಯು ಶಿಫಾರಸು ಮಾಡಿದ 2 ಸಲಹೆಗಳಿಗೆ ಪ್ರಧಾನಿ ನರೇಂದ್ರ ಮೋದಿ , ಅವರ ಕಚೇರಿ ಹಾಗೂ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನಿರಾಕರಿಸಿದೆ.

ಹೊಸ ಕ್ರಿಮಿನಲ್ ಕಾನೂನುಗಳಲ್ಲಿ ಸಲಿಂಗಕಾಮಿ ಸಂಬಂಧಗಳು ಮತ್ತು ವ್ಯಭಿಚಾರ ಸೇರಿಸುವ ಸಮಿತಿ ಶಿಫಾರಸಿಗೆ ಅಸಮ್ಮತಿ ಸೂಚಿಸಿದೆ. ಏಕೆಂದರೆ ಸಂಸದೀಯ ಸ್ಥಾಯಿ ಸಮಿತಿ ಶಿಫಾರಸು ಮಾಡಿದ ಎರಡೂ ಕಾನೂನು ಸಲಹೆಗಳು ದೂರಗಾಮಿ ಪರಿಣಾಮ ಉಂಟು ಮಾಡಲಿದೆ. ಜೊತೆಗೆ ಸುಪ್ರೀಂ ಕೋರ್ಟ್‌ಗೆ ಮತ್ತು ಅದರ ತೀರ್ಪುಗಳಿಗೆ ವಿರುದ್ಧವಾಗಿವೆ ಎಂಬ ಕಾರಣಕ್ಕಾಗಿ ಒಪ್ಪಿಗೆ ನಿರಾಕರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಈ ಎರಡು ಸಲಹೆಗಳ ಪೈಕಿ ಒಂದು ವ್ಯಭಿಚಾರದ ಅಪರಾಧಕ್ಕೆ ಸಂಬಂಧಿಸಿದ್ದಾಗಿದ್ದರೆ, ಇನ್ನೊಂದು ಸಲಿಂಗ ಕಾಮ ಅಪರಾಧ ಎಂದು ಪರಿಣಿಸುವುದಾಗಿದೆ. 2023ರ ಭಾರತೀಯ ನ್ಯಾಯ ಸಂಹಿತಾ ಮಸೂದೆಯಲ್ಲಿ ವ್ಯಭಿಚಾರದ ಅಪರಾಧವನ್ನು ಉಳಿಸಿಕೊಳ್ಳಬೇಕೆಂದು ಸಮಿತಿಯು ಶಿಫಾರಸು ಮಾಡಿತ್ತು. ಆದ್ರೆ 2018 ರಲ್ಲಿ ಸುಪ್ರೀಂ ಕೋರ್ಟ್ ವ್ಯಭಿಚಾರವನ್ನು ಅಪರಾಧವೆಂದು ಪರಿಗಣಿಸುವುದನ್ನ ತಳ್ಳಿಹಾಕಿದೆ, ಇದು ಮಹಿಳೆಯರ ವಿರುದ್ಧದ ತಾರತಮ್ಯಕ್ಕೆ ಎಡೆಮಾಡಿಕೊಡುತ್ತದೆ. ಮಾತ್ರವಲ್ಲದೇ ಮಹಿಳೆಯರ ಘನತೆಯನ್ನು ಕುಗ್ಗಿಸುತ್ತದೆ ಎಂದು ಸುಪ್ರೀಂ ಕೋರ್ಟ್​ ಹೇಳಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು