News Kannada
Monday, October 03 2022

ಉತ್ತರ ಪ್ರದೇಶ

ಪಕ್ಷ ಬಯಸಿದರೆ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುತ್ತೇನೆ : ಯೋಗಿ ಆದಿತ್ಯನಾಥ್ - 1 min read

Photo Credit :

ಲಖನೌ, ನ.6 : ಪಕ್ಷ ಬಯಸಿದರೆ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುತ್ತೇನೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಯಾವಾಗಲೂ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ. ಪಕ್ಷ ಹೇಳಿದರೆ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ. ನಮ್ಮ ಪಕ್ಷವು ಸಂಸದೀಯ ಮಂಡಳಿಯನ್ನು ಹೊಂದಿದೆ. ಯಾರು, ಎಲ್ಲಿಂದ ಸ್ರ್ಪಧಿಸಬೇಕು ಎಂಬುದನ್ನು ಅದು ನಿರ್ಧರಿಸುತ್ತದೆ ಎಂದು ಅವರು ಹೇಳಿದ್ದಾರೆ.

ಕಳೆದ 2017ರ ವಿಧಾನಸಭೆ ಚುನಾವಣೆ ಪೂರ್ವದಲ್ಲಿ ನಮ್ಮ ಸರ್ಕಾರ ನೀಡಿದ ಎಲ್ಲ ಭರವಸೆಗಳನ್ನೂ ಈಡೇರಿಸಿದೆ. ನಮ್ಮ ಅಧಿಕಾರಾವಧಿಯಲ್ಲಿ ಉತ್ತರ ಪ್ರದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸುಧಾರಿಸಿದೆ ಎಂದು ಹೇಳಿದ ಅವರು, ದೀಪಾವಳಿ ಸೇರಿದಂತೆ ಎಲ್ಲ ಹಬ್ಬಗಳನ್ನೂ ಶಾಂತಿಯುತವಾಗಿ ಆಚರಿಸಲಾಯಿತು.

ಸಮಾಜದ ಕಟ್ಟಕಡೆಯ ವ್ಯಕ್ತಿಗೂ ವಿವಿಧ ಯೋಜನೆಗಳ ಪ್ರಯೋಜನಗಳು ತಲುಪಿವೆ. ಈ ಅವಧಿಯಲ್ಲಿ 4.5 ಲಕ್ಷ ಜನರಿಗೆ ಪಾರದರ್ಶಕ ರೀತಿಯಲ್ಲಿ ಉದ್ಯೋಗ ಲಭಿಸಿದೆ. ನೇಮಕಾತಿ ಪ್ರಕ್ರಿಯೆಯಲ್ಲಿ ಯಾರೂ ಆಕ್ಷೇಪ ವ್ಯಕ್ತಪಡಿಸಿಲ್ಲ ಎಂದು ತಿಳಿಸಿದರು.

ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸಿದ ನಂತರ ಉತ್ತರ ಪ್ರದೇಶ ಸರ್ಕಾರವು ಎರಡೂ ಇಂಧನಗಳ ಮೇಲಿನ ವ್ಯಾಟ್ ಕಡಿಮೆ ಮಾಡಿದೆ ಎಂದು ತಿಳಿಸಿದರು.

See also  ಉತ್ತರ ಪ್ರದೇಶದಲ್ಲಿ ಬಿಜೆಪಿಯು ದ್ವೇಷ, ವಿಭಜನೆಯ ರಾಜಕೀಯ ಮಾಡುತ್ತಿದೆ: ಅಖಿಲೇಶ್ ಯಾದವ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

44
News Kannada

The most exciting, trusted and preferred news websites of Karnataka and Kannadigas around the world.

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು