News Kannada
Thursday, March 30 2023

ಉತ್ತರ ಪ್ರದೇಶ

ಉತ್ತರ ಪ್ರದೇಶ : ಸರಯೂ ನಹರ್​ ರಾಷ್ಟ್ರೀಯ ಯೋಜನೆಗೆ ಚಾಲನೆ ನೀಡಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ
Photo Credit :

ನಾಲ್ಕು ದಶಕದಿಂದ ಬಾಕಿ ಇದ್ದ ಉತ್ತರ ಪ್ರದೇಶದ ಬಲರಾಂಪುರ ಜಿಲ್ಲೆಯಲ್ಲಿ ನಿರ್ಮಾಣಗೊಂಡಿರುವ ಸರಯೂ ನಹರ್​ ರಾಷ್ಟ್ರೀಯ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಇಂದು ಚಾಲನೆ ನೀಡಿದರು.

ಸರಯೂ ನಹರ್ ರಾಷ್ಟ್ರೀಯ ಯೋಜನೆಗೆ ಒಟ್ಟು 9,800 ಕೋಟಿ ರೂ ವೆಚ್ಚ ಮಾಡಲಾಗಿದ್ದು, 9 ಜಿಲ್ಲೆಯ 14 ಲಕ್ಷ ಹೆಕ್ಟರ್ ಭೂಮಿಗೆ ನೀರಾವರಿ ಸೌಲಭ್ಯ ಒದಗಿಸುತ್ತದೆ.

ಮುಂದಿನ ವರ್ಷ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ನಡೆಯಲಿದ್ದು, ಹೀಗಾಗಿ ಮೇಲಿಂದ ಮೇಲೆ ಯೋಗಿ ನಾಡಿಗೆ ಪ್ರಯಾಣ ಬೆಳೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಇಂದು ಕೂಡ ಅಲ್ಲಿಗೆ ತೆರಳಿ ಬೃಹತ್​ ಯೋಜನೆ ಲೋಕಾರ್ಪಣೆಗೊಳಿಸಿದ್ದಾರೆ.

ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿರುವ ಮೋದಿ, ಉತ್ತರ ಪ್ರದೇಶದಲ್ಲಿ ಈ ಹಿಂದೆ ಆಡಳಿತ ನಡೆಸಿರುವ ಅನೇಕ ಪಕ್ಷಗಳು ತಮ್ಮ ಹಿತಾಸಕ್ತಿಗೆ ಕೆಲಸ ಮಾಡಿದ್ದು, ಇಂತಹ ಪ್ರಮುಖ ಯೋಜನೆ ಸ್ಥಗಿತಗೊಳಿಸಿದ್ದವು ಎಂದರು.

ಉತ್ತರ ಪ್ರದೇಶದಲ್ಲಿ ಕೇವಲ ರಿಬ್ಬನ್​ ಕತ್ತರಿಸುವುದು, ನಂತರ ಯೋಜನೆ ಮರೆತು ಬಿಡುವುದು ಸಾಮಾನ್ಯವಾಗಿದೆ. ಇದೇ ಕಾರಣಕ್ಕಾಗಿ ಈ ಯೋಜನೆ ಬಾಕಿ ಉಳಿದಿತ್ತು.ಆದರೆ, ಇದೀಗ ಯೋಗಿ ಸರ್ಕಾರ ಇಂತಹ ಮಹತ್ವದ ಯೋಜನೆಗೆ ಅಂತಿಮ ರೂಪ ನೀಡಿದ್ದು, ರೈತರಿಗೆ ಸಹಕಾರಿಯಾಗಲಿದೆ ಎಂದರು.

ಕಾರ್ಯಕ್ರಮದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​, ರಾಜ್ಯಪಾಲರಾದ ಆನಂದಿಬೆನ್ ಪಟೇಲ್​, ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್​ ಶೇಖಾವತ್​ ಮತ್ತು ಉಪಮುಖ್ಯಮಂತ್ರಿ ಕೇಶವ್​​ ಪ್ರಸಾದ್ ಮೌರ್ಯ ಉಪಸ್ಥಿತರಿದ್ದರು.

See also  ಆಜಾದಿ @75: 75 ಸಾವಿರ ಫಲಾನುಭವಿಗಳಿಗೆ ಮನೆಯ ಕೀ ಹಸ್ತಾಂತರಿಸಿದ ಪ್ರಧಾನಿ ಮೋದಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು