News Kannada
Tuesday, January 31 2023

ಉತ್ತರ ಪ್ರದೇಶ

ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಪತ್ನಿ ಡಿಂಪಲ್​ ಯಾದವ್ ಗೆ​ ಕೊರೊನಾ ಸೋಂಕು ದೃಢ

Photo Credit :

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಎಲ್ಲಾ ಪಕ್ಷಗಳು ಭರದಿಂದ ಸಿದ್ಧತೆ ನಡೆಸುತ್ತಿರುವ ಬೆನ್ನಲ್ಲೇ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್​ ಯಾದವ್​ ಪತ್ನಿ ಡಿಂಪಲ್​ ಯಾದವ್​ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ.

ರಾಜಕೀಯದಲ್ಲಿ ಸಕ್ರಿಯರಾಗಿರುವ ಡಿಂಪಲ್​ ಯಾದವ್​ ಪಕ್ಷದ ಪ್ರಬಲ ಅಭ್ಯರ್ಥಿ ಕೂಡ ಹೌದು. ಸಮಾಜವಾದಿ ಪಕ್ಷದ ಪ್ರಚಾರ ಕಾರ್ಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದ ಡಿಂಪಲ್​ ಯಾದವ್​ ತಾವು ಕೊರೊನಾ ಸೋಂಕಿಗೆ ತುತ್ತಾಗಿರುವ ಬಗ್ಗೆ ಟ್ವಿಟರ್ ಮೂಲಕ ಮಾಹಿತಿ ನೀಡಿದ್ದಾರೆ.

ನಾನು ಕೊರೊನಾ ಪರೀಕ್ಷೆ ಮಾಡಿಸಿಕೊಂಡಿದ್ದೆ. ನನ್ನ ವರದಿ ಪಾಸಿಟಿವ್​ ಎಂದು ಬಂದಿದೆ. ನಾನು ಸಂಪೂರ್ಣ ಲಸಿಕೆಯನ್ನು ಪಡೆದಿದ್ದು ಸೋಂಕಿನ ಯಾವುದೇ ಲಕ್ಷಣಗಳು ಗೋಚರವಾಗಿಲ್ಲ. ನಾನು ಐಸೋಲೇಟ್​ ಆಗಿದ್ದೇನೆ ಎಂದು ಡಿಂಪಲ್​ ಹಿಂದಿಯಲ್ಲಿ ಟ್ವೀಟಾಯಿಸಿದ್ದಾರೆ.

See also  ರಾಜ್ಯದಲ್ಲಿ ಇಂದು 14,366 ಜನರಿಗೆ ಕೊರೊನಾ ಸೋಂಕು, ಪಾಸಿಟಿವಿಟಿ ದರ13.45%
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12790
NewsKannada

Read More Articles
Editor's Pick

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು