ಲಖನೌ: ಕೋವಿಡ್-19 ಹೊಸ ಪ್ರಕರಣಗಳು ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ರಾತ್ರಿ ಕರ್ಫ್ಯೂ ನಿರ್ಬಂಧವನ್ನು ಉತ್ತರ ಪ್ರದೇಶ ಸರ್ಕಾರ ತೆಗೆದುಹಾಕಿದೆ.
ಉತ್ತರ ಪ್ರದೇಶದಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ 842 ಹೊಸ ಪ್ರಕರಣಗಳು ವರದಿಯಾಗಿವೆ.ಸಕ್ರಿಯ ಪ್ರಕರಣಗಳ ಪ್ರಮಾಣ ವಾರದಿಂದ ಈಚೆಗೆ ಗಣನೀಯವಾಗಿ ಇಳಿಕೆಯಾಗಿದ್ದು, ಇನ್ನು ಕೇವಲ 8,683 ಪ್ರಕರಣಗಳಷ್ಟೇ ಬಾಕಿ ಇವೆ.
ಇದರೊಂದಿಗೆ ರಾಜ್ಯದಲ್ಲಿ ವರದಿಯಾದ ಕೋವಿಡ್ ಪ್ರಕರಣಗಳ ಸಂಖ್ಯೆ 20,63,9041 ತಲುಪಿದೆ. ದೇಶದಲ್ಲಿಯೂ ಹೊಸ ಪ್ರಕರಣಗಳ ಪ್ರಮಾಣ ಕುಸಿದಿದೆ. ಶನಿವಾರ ಹೊಸದಾಗಿ 22,270 ಪ್ರಕರಣಗಳು ವರದಿಯಾಗಿವೆ. ಇದೇ ವೇಳೆ 325 ಸೋಂಕಿತರು ಮೃತಪಟ್ಟಿದ್ದು, 60,298 ಮಂದಿ ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.