News Kannada
Thursday, September 29 2022

ಉತ್ತರ ಪ್ರದೇಶ

ಮಾ. 25ಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿಯಾಗಿ ಯೋಗಿ ಪ್ರಮಾಣವಚನ - 1 min read

Photo Credit :

ಲಖನೌ:  ಮಾರ್ಚ್ 25ಕ್ಕೆ  ಯೋಗಿ ಆದಿತ್ಯನಾಥ್ ಅವರು ಸತತ ಎರಡನೇ ಅವಧಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಸಮಾರಂಭವು ಮಾರ್ಚ್ 25 ರಂದು ಸಂಜೆ 4 ಗಂಟೆಗೆ ಲಖನೌದ ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಅವರು ಹೇಳಿದ್ದಾರೆ.

ಉತ್ತರ ಪ್ರದೇಶದಲ್ಲಿ ಹೊಸದಾಗಿ ಚುನಾಯಿತ ಬಿಜೆಪಿ ಸರ್ಕಾರದ ಪ್ರಮಾಣ ವಚನ ಸಮಾರಂಭವು ಮಾರ್ಚ್ 25 ರಂದು ರಾಜ್ಯದ ರಾಜಧಾನಿಯಲ್ಲಿ ನಡೆಯಲಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.

ಯೋಗಿ ಪ್ರಮಾಣವಚನ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ ಬಿಜೆಪಿಯ ಹಲವು ಹಿರಿಯ ನಾಯಕರು ಪಾಲ್ಗೊಳ್ಳುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಬಿಜೆಪಿ ಆಡಳಿತವಿರುವ ಇತರ ರಾಜ್ಯಗಳ ಮುಖ್ಯಮಂತ್ರಿಗಳು ಸಹ ಸಮಾರಂಭದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ವಿರೋಧ ಪಕ್ಷಗಳ ಉನ್ನತ ನಾಯಕರಿಗೂ ಸಮಾರಂಭಕ್ಕೆ ಆಹ್ವಾನ ನೀಡಲಾಗುವುದು ಎಂದು ಅವರು ಹೇಳಿದ್ದಾರೆ.

See also  ವಿದ್ಯುತ್ ಕ್ಷೇತ್ರದಲ್ಲಿ ಭಾರಿ ಸುಧಾರಣೆ ಅಗತ್ಯ; ಯೋಗಿ ಆದಿತ್ಯನಾಥ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12795
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು