News Kannada
Wednesday, November 30 2022

ಉತ್ತರ ಪ್ರದೇಶ

ಪತಿಯನ್ನು ಮರಕ್ಕೆ ಕಟ್ಟಿ ಹಾಕಿ, ಪತ್ನಿಯ ಮೇಲೆ ಸಾಮೂಹಿಕ ಅತ್ಯಾಚಾರ - 1 min read

Photo Credit :

ಮುಜಾಫರ್‌ನಗರ (ಉತ್ತರ ಪ್ರದೇಶ) : ಕಿಡಿಗೇಡಿಗಳ ಗುಂಪೊಂದು ವ್ಯಕ್ತಿಯೊಬ್ಬರನ್ನು ಮರಕ್ಕೆ ಕಟ್ಟಿ ಹಾಕಿ, ಅವರ ಪತ್ನಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಅಮಾನುಷ ಕೃತ್ಯ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಸಂತ್ರಸ್ತರ ಕುಟುಂಬ ಈ ಸಂಬಂಧ ನ್ಯೂ ಮಂಡಿ ಪೊಲೀಸ್ ಠಾಣೆಯಲ್ಲಿ ಗುರುವಾರ ದೂರು ದಾಖಲಿಸಿದೆ. ವ್ಯಕ್ತಿಯು ಹೆಂಡತಿಯೊಂದಿಗೆ ಸಂಬಂಧಿಕರ ಮನೆಯಿಂದ ಬುಧವಾರ ರಾತ್ರಿ ತಮ್ಮ ಹಳ್ಳಿಗೆ ತೆರಳುತ್ತಿದ್ದರು. ಈ ವೇಳೆ ದಂಪತಿಯನ್ನು ಸುತ್ತುವರಿದ 10 ಜನರ ಗುಂಪು, ಹತ್ತಿರದಲ್ಲೇ ಇದ್ದ ಮಾವಿನ ತೋಪಿಗೆ ಅವರನ್ನು ಎಳೆದೊಯ್ದಿದೆ. ನಂತರ ವ್ಯಕ್ತಿಯನ್ನು (ಪತಿಯನ್ನು) ಮರಕ್ಕೆ ಕಟ್ಟಲಾಗಿದೆ. ಗುಂಪಿನಲ್ಲಿದ್ದ ನಾಲ್ವರು, ಉಳಿದವರ ಎದುರೇ ಮಹಿಳೆಯ ಮೇಲೆ ಅತ್ಯಾಚಾರವೆಸಗಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಸದ್ಯ ಇಬ್ಬರು ಅಪ್ರಾಪ್ತರು ಸೇರಿದಂತೆ ಒಟ್ಟು 10 ಆರೋಪಿಗಳನ್ನೂ ಬಂಧಿಸಲಾಗಿದೆ ಎಂದು ಮಜಾಫರ್‌ನಗರ ಎಸ್‌ಪಿ (ನಗರ) ಅರ್ಪಿತ್ ವಿಜಯವರ್ಗಿಯ ಹೇಳಿದ್ದಾರೆ.

ಮಹಿಳೆಯನ್ನು ವೈದ್ಯಕೀಯ ಪರೀಕ್ಷೆ ಕಳುಹಿಸಲಾಗಿದ್ದು, ಅಪರಾಧ ದಂಡ ಸಂಹಿತೆಯ (ಸಿಆರ್‌ಪಿಸಿ) ಸೆಕ್ಷನ್‌ 164ರ ಅಡಿಯಲ್ಲಿ ಮ್ಯಾಜಿಸ್ಟ್ರೇಟ್‌ ಎದುರು ಶೀಘ್ರದಲ್ಲೇ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗುವುದು ಎಂದು ಠಾಣಾಧಿಕಾರಿ ಪಂಕಜ್ ಪಂತ್‌ ತಿಳಿಸಿದ್ದಾರೆ.

See also  18 ವರ್ಷಕ್ಕಿಂತ ಮೇಲ್ಪಟ್ಟ ವಯಸ್ಕ ಯುವತಿಗೆ ಸ್ವಇಚ್ಛೆಯಿಂದ ಮದುವೆಯಾಗುವ ಹಕ್ಕಿದೆ; ಅಲಹಾಬಾದ್ ಹೈಕೋರ್ಟ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು