News Kannada
Monday, September 26 2022

ಉತ್ತರ ಪ್ರದೇಶ

ಉತ್ತರ ಪ್ರದೇಶ: ಪತ್ನಿಯನ್ನು ಸ್ನೇಹಿತನಿಂದ ಅತ್ಯಾಚಾರ ಮಾಡಿಸಿದ ಪತಿ - 1 min read

SIT to probe gang-rape case in Bihar's Vaishali
Photo Credit :

ಬುಡೌನ್ (ಯುಪಿ), ಮೇ 2 : ವಿರೋಧಿಗಳನ್ನು ಜೈಲಿಗೆ ಕಳುಹಿಸುವ ಸಲುವಾಗಿ ವ್ಯಕ್ತಿಯೊಬ್ಬ ತನ್ನ ಪತ್ನಿಯ ಮೇಲೆಯೇ ಅತ್ಯಾಚಾರ ಮಾಡಿಸಿರುವ ಘಟನೆ ಉತ್ತರ ಪ್ರದೇಶದ ಬುಡೌನ್‍ನಲ್ಲಿ ನಡೆದಿದೆ. 22 ವರ್ಷದ ಮಹಿಳೆಯನ್ನು ಆಕೆಯ ಪತಿಯೇ ಬುಡೌನ್‍ನ ಸಹಸ್ವಾನ್ ಪ್ರದೇಶದ ಕಾಡಿಗೆ ಬೈಕ್‍ನಲ್ಲಿ ಕರೆದೊಯ್ಯುವಾಗ ಅತ್ಯಾಚಾರ ನಡೆದಿದೆ ಎಂದು ಪೊಲೀಸರು ದೂರು ಆಧರಿಸಿ ಪ್ರಕರಣ ದಾಖಲಿಸಿದ್ದಾರೆ.

ನಂತರದ ವಿಚಾರಣೆಯಲ್ಲಿ ಪತಿಯ ವಿಕೃತ ಮನಸ್ಥಿತಿ ಬೆಳಕಿಗೆ ಬಂದಿದೆ. ತನ್ನ ಸ್ನೇಹಿತರನ್ನು ಕೂಡ ಕಾಡಿಗೆ ಕರೆಸಿದ ಪತಿ, ಪತ್ನಿ ಮೇಲೆ ಎರಡು ಬಾರಿ ಅತ್ಯಾಚಾರ ಮಾಡಿಸಿದ್ದಾನೆ. ಬಳಿಕ ಪೊಲೀಸ್ ಸಹಾಯವಾಣಿಗೆ ಕರೆ ಮಾಡಿ ಇಬ್ಬರು ವ್ಯಕ್ತಿಗಳು ತಮ್ಮ ಪತ್ನಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ದೂರು ನೀಡಿದ್ದಾನೆ.

ಘಟನೆಯ ಬಗ್ಗೆ ಆಳವಾದ ವಿಚಾರಣೆ ನಡೆಸಿದಾಗ ಪತ್ನಿಯೇ ಸತ್ಯ ಬಾಯಿ ಬಿಟ್ಟಿದ್ದಾಳೆ. ತಮ್ಮ ಪತಿ ಆತನ ಇಬ್ಬರು ಸ್ನೇಹಿತರ ಜೊತೆ ದ್ವೇಷವಿತ್ತು. ಅದಕ್ಕೆ ಪ್ರತಿಕಾರ ತಿರಿಸಿಕೊಳ್ಳಲು ಮತ್ತು ಇಬ್ಬರನ್ನು ಜೈಲಿಗೆ ಕಳುಹಿಸಲು ತನ್ನ ಮೇಲೆ ಅತ್ಯಾಚಾರ ಮಾಡಿಸಿದ್ದಾನೆ ಎಂದು ಹೇಳಿಕೆ ನೀಡಿದ್ದಾಳೆ.

ಪ್ರಕರಣದ ಸ್ವರೂಪ ಬದಲಾಗಿದ್ದು, ಪೊಲೀಸರು ಪತಿ ಮತ್ತು ಅತ್ಯಾಚರವೆಸಗಿದ ಸ್ನೇಹಿತರ ವಿರುದ್ಧ ದೂರು ದಾಖಲಿಸಿ, ಪತಿ, ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಮತ್ತೊಬ್ಬ ಆರೋಪಿ ತಲೆ ಮರೆಸಿಕೊಂಡಿದ್ದು, ಆತನಿಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಗ್ರಾಮಾಂತರ ವಿಭಾಗದ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ಸಿದ್ಧಾರ್ಥ್ ವರ್ಮಾ ತಿಳಿಸಿದ್ದಾರೆ.

See also  ಉತ್ತರ ಪ್ರದೇಶ: ಕೊಳದಲ್ಲಿ ಸ್ನಾನಕ್ಕಿಳಿದಿದ್ದ ಬಾಲಕ ಮೊಸಳೆಗೆ ಬಲಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು