News Kannada
Friday, January 27 2023

ಉತ್ತರ ಪ್ರದೇಶ

ಉತ್ತರ ಪ್ರದೇಶ: ಆಸ್ಪತ್ರೆಯಲ್ಲಿ ಗರ್ಭಿಣಿ ಮಹಿಳೆ ಮೇಲೆ ಅತ್ಯಾಚಾರ

NEW DELHI: A woman was gang-raped
Photo Credit : IANS

ಉತ್ತರ ಪ್ರದೇಶ: ಮಿರ್ಜಾಪುರದ ಆಸ್ಪತ್ರೆಯೊಂದರಲ್ಲಿ ಗರ್ಭಿಣಿಯ ಮೇಲೆ ಅತ್ಯಾಚಾರ ನಡೆಸಿರುವ ಆರೋಪ ಕೇಳಿಬಂದಿದೆ. ಶೌಚಾಲಯ ಸ್ವಚ್ಛಗೊಳಿಸುವ ಸಿಬ್ಬಂದಿಯೊಬ್ಬ ಈ ಕೃತ್ಯ ನಡೆಸಿದ್ದಾನೆ. ಮಹಿಳೆ ಶೌಚಾಲಯಕ್ಕೆ ಹೋದ ಸಂದರ್ಭದಲ್ಲಿ ಹಿಂಬಾಲಿಸಿದ ವ್ಯಕ್ತಿ ಆಕೆಯ ಮೇಲೆ ಬಲಾತ್ಕಾರ ಮಾಡಿದ್ದಾನೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದಾರೆ.

ಮೇ 7 ರ ರಾತ್ರಿ ಮಿರ್ಜಾಪುರದ ವಿಭಾಗೀಯ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಮೂರು ತಿಂಗಳ ಗರ್ಭಿಣಿಯಾದ ಆ ಮಹಿಳೆಯನ್ನು ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಂದು ರಾತ್ರಿ 9 ರಿಂದ 10 ರ ಸುಮಾರಿಗೆ ಮಹಿಳೆಯು ತಾನು ದಾಖಲಾಗಿದ್ದ ವಾರ್ಡ್ ನ ವಾಶ್ ರೂಂಗೆ ಹೋದ ಸಂದರ್ಭದಲ್ಲಿ ವ್ಯಕ್ತಿಯು ಶೌಚಾಲಯವನ್ನು ಸ್ವಚ್ಛ ಮಾಡುತ್ತಿದ್ದ.

ಶೌಚಾಲಯಕ್ಕೆ ಹೋದ ತಕ್ಷಣ ಆ ವ್ಯಕ್ತಿ ಮಹಿಳೆಯ ಬಟ್ಟೆಯನ್ನು ಕಿತ್ತೆಸೆದು, ಈಗ ನಿನ್ನ ಮೈಮೇಲೆ ಬಟ್ಟೆ ಇಲ್ಲ, ಎಲ್ಲಿಗೂ ಹೋಗಲು ಸಾಧ್ಯವಿಲ್ಲ ಎಂದು ಹೇಳುತ್ತಾ ವಿಕೃತವಾಗಿ ವರ್ತಿಸಿದ್ದಾನೆ. ಇದಾದ ಬಳಿಕ ಏನೂ ಮಾತಾಡದಂತೆ ಎಚ್ಚರಿಕೆ ನೀಡಿ ಅತ್ಯಾಚಾರ ಎಸಗಿದ ಎಂದು ಮಹಿಳೆ ದೂರು ನೀಡಿದ್ದಾಳೆ.

ಅವನ ದುರ್ವರ್ತನೆಯಿಂದ ಆತಂಕಕ್ಕೆ ಒಳಗಾದ ಮಹಿಳೆ ಕೂಗಿಕೊಂಡಿದ್ದಾಳೆ. ಇದನ್ನು ಕೇಳಿ ವಾರ್ಡ್ ನಲ್ಲಿದ್ದ ಮಹಿಳೆಯೊಬ್ಬರು ಶೌಚಾಲಯದ ಬಳಿ ಬರುವಷ್ಟರಲ್ಲಿ ದುರುಳ ಪರಾರಿಯಾಗಿದ್ದಾನೆ.

See also  ಆರು ವರ್ಷದ ಬಾಲಕಿಯನ್ನು ನೆರೆ ಮನೆ ವ್ಯಕ್ತಿ ಅತ್ಯಾಚಾರವೆಸಗಿ ನಾಪತ್ತೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12790
NewsKannada

Read More Articles
Editor's Pick

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು