News Kannada
Tuesday, January 31 2023

ಉತ್ತರ ಪ್ರದೇಶ

ಮತಾಂತರಿಸುವ ಉದ್ದೇಶದಿಂದ ಸರ್ಕಾರಿ ಶಿಕ್ಷಕಿ ಮೇಲೆ ಅತ್ಯಾಚಾರ

SIT to probe gang-rape case in Bihar's Vaishali
Photo Credit :

ಶಹಜಹಾನ್‌ಪುರ(ಯುಪಿ): ತನ್ನ ಧರ್ಮವನ್ನು ಬದಲಿಸಿ ಮದುವೆಯಾಗುವಂತೆ ಒತ್ತಡ ಹೇರುವ ಉದ್ದೇಶದಿಂದ 28 ವರ್ಷದ ಸರ್ಕಾರಿ ಶಾಲೆಯ ಶಿಕ್ಷಕಿಯನ್ನ ರೇಪ್ ಮಾಡಿ, ಆ ಕುಕೃತ್ಯದ ವೀಡಿಯೊವನ್ನು ರೆಕಾರ್ಡ್ ಮಾಡಲಾಗಿತ್ತು ಎಂದು ಶುಕ್ರವಾರ ಪೊಲೀಸರು ತಿಳಿಸಿದ್ದಾರೆ.

ಆರೋಪಿ ಅಮೀರ್ ಸೇರಿದಂತೆ ಐವರ ವಿರುದ್ಧ ಉತ್ತರ ಪ್ರದೇಶದ ಕಾನೂನುಬಾಹಿರ ಧರ್ಮ ಮತಾಂತರ ನಿಷೇಧ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಗುರುವಾರ ದಾಖಲಾದ ಎಫ್‌ಐಆರ್‌ನಲ್ಲಿ ಆರೋಪಿಯ ತಾಯಿ, ಸಹೋದರಿ, ಸಹೋದರ ಮತ್ತು ಇನ್ನೊಬ್ಬ ಸಂಬಂಧಿಕರ ಹೆಸರೂ ಇದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಮೇ 4 ರಂದು ಮಹಿಳೆ ತನ್ನ ಮನೆಗೆ ಹೋಗುತ್ತಿದ್ದಾಗ ಅದೇ ಗ್ರಾಮದ ಆರೋಪಿ ಆಕೆಯನ್ನು ಡ್ರಾಪ್ ಮಾಡಲು ಮುಂದಾದ. ಈ ವೇಳೆ ಆಕೆಯ ಮೇಲೆ ಯಾವುದೋ ವಸ್ತುವನ್ನ ಸಿಂಪಡಿಸಿ ಪ್ರಜ್ಞಾಹೀನಳನ್ನಾಗಿ ಮಾಡಿದ. ನಂತರ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸರು ಎಫ್‌ಐಆರ್‌ನಲ್ಲಿ ಉಲ್ಲೇಖಿಸಿದ್ದಾರೆ.

ಪೊಲೀಸ್ ಅಧೀಕ್ಷಕ (ನಗರ) ಸಂಜಯ್ ಕುಮಾರ್ ಮಾತನಾಡಿ ಆರೋಪಿ ಅಮೀರ್ ಅವರ ಕುಟುಂಬ ಸದಸ್ಯರು ಮತಾಂತರಗೊಂಡು ಮದುವೆಯಾಗುವಂತೆ ಒತ್ತಡ ಹೇರುತ್ತಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ. ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರನ್ನು ಹಿಡಿಯಲು ಪ್ರಯತ್ನಿಸಲಾಗುತ್ತಿದೆ ಎಂದು ಎಸ್ಪಿ ತಿಳಿಸಿದ್ದಾರೆ. ಸಂತ್ರಸ್ತೆಯನ್ನ ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ ಎಂದರು.

See also  ಸೆಲ್ಫಿ ತೆಗೆದುಕೊಳ್ಳುವಾಗ ರೈಲು ಡಿಕ್ಕಿ ಹೊಡೆದು ವ್ಯಕ್ತಿ ಸಾವು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12790
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು