News Kannada
Thursday, July 07 2022

ಉತ್ತರ ಪ್ರದೇಶ

ಮುಂದಿನ ಲೋಕಸಭೆ ಚುನಾವಣೆಯಲ್ಲಿ 75 ಕ್ಷೇತ್ರಗಳಲ್ಲಿ ಗೆಲ್ಲುವೆವು: ಸಿಎಂ ಯೋಗಿ - 1 min read

Photo Credit :

ಲಕ್ನೋ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಪೂರ್ತಿಯಾದ ಮೇಲೆ ಈಗ ಜ್ಞಾನವಾಪಿ, ಮಥುರಾ, ವೃಂದಾವನ್‌, ವಿಂಧ್ಯವಾಸಿನಿ ಧಾಮ, ನೈಮಿಷ ಧಾಮದ ವಿಚಾರಗಳು ಮುನ್ನೆಲೆಗೆ ಬರಲಿವೆ. ಜತೆಗೆ 2024ರ ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ 80 ಕ್ಷೇತ್ರಗಳ ಪೈಕಿ 75ರಲ್ಲಿ ಜಯ ಸಾಧಿಸಲೇಬೇಕು ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಹೇಳಿದ್ದಾರೆ.

ಲಕ್ನೋದಲ್ಲಿ ಭಾನುವಾರ ಆಯೋಜಿಸಲಾಗಿದ್ದ ಉತ್ತರ ಪ್ರದೇಶ ಬಿಜೆಪಿ ಘಟಕದ ಒಂದು ದಿನದ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಈ ಮಾತುಗಳನ್ನಾಡಿದ್ದಾರೆ. ಗಮನಾರ್ಹವೆಂದರೆ ಇತ್ತೀಚಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರ ಉಳಿಸಿಕೊಂಡ ಬಳಿಕ ನಡೆದ ಮೊದಲ ಸಮಾವೇಶ ಇದಾಗಿದೆ.

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಕಾರ್ಯ ಶುರುವಾದ ಬಳಿಕ ಕಾಶಿಯಲ್ಲಿ ಅದ್ಧೂರಿಯಾಗಿ ವಿಶ್ವನಾಥ ದೇಗುಲ ಪುನರ್‌ನಿರ್ಮಾಣದ ಕಾಮಗಾರಿ ಕೈಗೆತ್ತಿಕೊಂಡು ಪೂರ್ಣಗೊಳಿಸಲಾಗಿದೆ. ಮುಂದಿನ ದಿನಗಳಲ್ಲಿ ಮಥುರಾ, ವೃಂದಾವನ, ವಿಂಧ್ಯವಾಸಿನಿ ಧಾಮ, ನೈಮಿಷ ಧಾಮದ ಅಭಿವೃದ್ಧಿ ವಿಚಾರಗಳು ಮುನ್ನೆಲೆಗೆ ಬರಲಿವೆ. ಹೀಗಾಗಿ, ಈ ನಿಟ್ಟಿನಲ್ಲಿ ನಾವೆಲ್ಲರೂ ಮುಂದೆ ಸಾಗಬೇಕಾಗಿದೆ ಎಂದು ಹೇಳಿದ್ದಾರೆ.

ಮುಂದಿನ ಲೋಕಸಭೆ ಚುನಾವಣೆಗಾಗಿ ಈಗಿನಿಂದಲೇ ಪಕ್ಷದ ಕಾರ್ಯಕರ್ತರು ಕೆಲಸ ಮಾಡಬೇಕಾಗಿದೆ ಎಂದು ಸಿಎಂ ಯೋಗಿ ಹೇಳಿದ್ದಾರೆ. ರಾಜ್ಯದ 80 ಲೋಕಸಭಾ ಕ್ಷೇತ್ರಗಳ ಪೈಕಿ 75ರಲ್ಲಿ ಜಯ ಸಾಧಿಸುವುದು ಅಗತ್ಯ. ಅದಕ್ಕಾಗಿ ಗುರಿ ಹಾಕಿಕೊಂಡು ಕೆಲಸ ಮಾಡಬೇಕಾಗಿದೆ ಎಂದು ಪ್ರತಿಪಾದಿಸಿದ್ದಾರೆ.

ಕೊರೊನಾ ಅವಧಿಯಲ್ಲಿ ಉತ್ತಮ ರೀತಿಯಲ್ಲಿ ಕೆಲಸ ಮಾಡಿದ್ದರಿಂದಲೇ ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಾಯಿತು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಮತ್ತೂಮ್ಮೆ ಚುನಾವಣೆಯಲ್ಲಿ ಗೆಲ್ಲಬೇಕಾಗಿದೆ ಎಂದಿದ್ದಾರೆ. 2017ರಲ್ಲಿ ಬಿಜೆಪಿ ಗೆದ್ದ ಬಳಿಕ ರಾಜ್ಯದ ಮೇಲೆ ದೇಶದ ಇತರ ಭಾಗದ ಜನರ ಅಭಿಪ್ರಾಯವೇ ಬದಲಾಗಿದೆ ಎಂದರು.

ಉ.ಪ್ರ.ದಲ್ಲಿನ ಧಾರ್ಮಿಕ ಸ್ಥಳಗಳಲ್ಲಿನ ಧ್ವನಿವರ್ಧಕಗಳನ್ನು ತೆಗೆಯಿಸಿದ ಕ್ರಮವನ್ನು ಸಮರ್ಥಿಸಿದ ಮುಖ್ಯಮಂತ್ರಿ, ಅವುಗಳಿಂದ ಜನರಿಗೆ ತೊಂದರೆಯಾಗುತ್ತಿತ್ತು. ಆ ಕಾರಣಕ್ಕಾಗಿಯೇ ಅವುಗಳನ್ನು ತೆಗೆಸಲಾಯಿತು. ಹನುಮಾನ್‌ ಜಯಂತಿ, ರಾಮ ನವಮಿ, ಈದ್‌ಉಲ್‌ಫಿತರ್‌ ಸೇರಿದಂತೆ ಹಲವು ಕಾರ್ಯಕ್ರಮಗಳು ಶಾಂತಿಯುತವಾಗಿ ನಡೆದವು. ಹೀಗಾಗಿ, ಉ.ಪ್ರ.ದಲ್ಲಿ ಕಾನೂನು ಸುವ್ಯವಸ್ಥೆಯೂ ಉತ್ತಮವಾಗಿದೆ ಎಂದರು.

See also  ಕಾಶ್ಮೀರ್ ಫೈಲ್ಸ್ ತಯಾರಿಸಬಹುದಾದರೆ ಲಖೀಂಪುರ್ ಫೈಲ್ಸ್ ಕೂಡ ನಿರ್ಮಿಸಿ; ಅಖಿಲೇಶ್‌ ಯಾದವ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು