News Kannada

ಉತ್ತರ ಪ್ರದೇಶ

ಆಂಬ್ಯುಲೆನ್ಸ್- ಟ್ರಕ್ ಡಿಕ್ಕಿ: ಏಳು ಮಂದಿ ಸಾವು - 1 min read

ಲಕ್ನೋ: ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ ಮಾಡಿಸಿಕೊಂಡು ಮನೆಗೆ ಹಿಂದಿರುಗುತ್ತಿದ್ದ ಸಂದರ್ಭದಲ್ಲಿ ಆಂಬ್ಯುಲೆನ್ಸ್ ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಏಳು ಮಂದಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಮಂಗಳವಾರ (ಮೇ 31) ಬೆಳಗ್ಗೆ ಉತ್ತರಪ್ರದೇಶದ ಬರೇಲಿಯಲ್ಲಿ ನಡೆದಿದೆ.

ಒಂದೇ ಕುಟುಂಬದ ಆರು ಮಂದಿ ದೆಹಲಿಯಲ್ಲಿ ಆರೋಗ್ಯ ತಪಾಸಣೆ ಮಾಡಿಸಿಕೊಂಡು ಆಂಬ್ಯುಲೆನ್ಸ್ ನಲ್ಲಿ ಪಿಲ್ಭಿಟ್ ಗೆ ವಾಪಸ್ ಆಗುತ್ತಿದ್ದ ವೇಳೆಯಲ್ಲಿ ದೆಹಲಿ-ಲಕ್ನೋ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರ್ಘಟನೆ ನಡೆದಿರುವುದಾಗಿ ವರದಿ ತಿಳಿಸಿದೆ.

ಅತಿಯಾದ ವೇಗದಿಂದಾಗಿ ಆಂಬ್ಯುಲೆನ್ಸ್ ನಿಯಂತ್ರಣ ತಪ್ಪಿ ರಸ್ತೆಯ ಡಿವೈಡರ್ ಗೆ ಹೊಡೆದು ನಂತರ ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಹಾಗೂ ಒಂದೇ ಕುಟುಂಬದ ಆರು ಮಂದಿ ಸೇರಿದಂತೆ ಏಳು ಜನರು ಸ್ಥಳದಲ್ಲಿಯೇ ಸಾವನ್ನಪ್ಪಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಘಟನೆಯಲ್ಲಿ ಸಾವನ್ನಪ್ಪಿರುವವರ ಗುರುತು ಪತ್ತೆ ಮಾಡಿದ್ದು, ಅವರ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಲಾಗಿದೆ. ಕುಟುಂಬ ಸದಸ್ಯರು ಆಗಮಿಸಿದ ನಂತರ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗುವುದು ಎಂದು ಪೊಲೀಸರು ಮಾಹಿತಿ ನೀಡಿರುವುದಾಗಿ ವರದಿ ಹೇಳಿದೆ.

ಘಟನೆಗೆ ಸಂಬಂಧಿಸಿದಂತೆ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

See also  ಹುಣಸೂರು: ಹಾಲಿನ ವಾಹನ-ಬೈಕ್ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು