ಲಕ್ನೋ: ಭಾರೀ ಮಳೆಯಿಂದಾಗಿ ಮನೆಯ ಗೋಡೆ ಕುಸಿದು 9 ಮಂದಿ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಾಜ್ಯ ರಾಜಧಾನಿಯ ಕಂಟೋನ್ಮೆಂಟ್ ಪ್ರದೇಶದ ದಿಲ್ಕುಶಾ ಪ್ರದೇಶದಲ್ಲಿ ಶುಕ್ರವಾರ ಮುಂಜಾನೆ ಈ ಘಟನೆ ನಡೆದಿದೆ. ಗಾಯಗೊಂಡವರನ್ನು ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತರಲ್ಲಿ ಮೂವರು ಪುರುಷರು, ಮೂವರು ಮಹಿಳೆಯರು ಮತ್ತು ಮೂವರು ಮಕ್ಕಳು ಸೇರಿದ್ದಾರೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಘಟನೆಯ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ ಮತ್ತು ಮೃತರ ಕುಟುಂಬಕ್ಕೆ ತಲಾ ನಾಲ್ಕು ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದ್ದಾರೆ.
ಜಿಲ್ಲಾ ಮ್ಯಾಜಿಸ್ಟ್ರೇಟ್ ಸೂರ್ಯಪಾಲ್ ಗಂಗ್ವಾರ್ ಅಪಘಾತದ ಸ್ಥಳಕ್ಕೆ ತಲುಪಿ ಪರಿಹಾರ ಕಾರ್ಯಾಚರಣೆಗಳ ಮೇಲ್ವಿಚಾರಣೆ ನಡೆಸಿದರು.