ಇಟಾವಾ, ಸೆಪ್ಟೆಂಬರ್ 22: ಉತ್ತರ ಪ್ರದೇಶದ ಇಟಾವಾದ ಸಿವಿಲ್ ಲೈನ್ ಪ್ರದೇಶದ ಚಂದ್ರಾಪುರ ಗ್ರಾಮದಲ್ಲಿ ಗುರುವಾರ ಭಾರಿ ಮಳೆಯಿಂದಾಗಿ ಮನೆಯ ಗೋಡೆ ಕುಸಿದು ನಾಲ್ವರು ಮಕ್ಕಳು ಮೃತಪಟ್ಟು, ಇನ್ನಿಬ್ಬರು ಗಾಯಗೊಂಡಿದ್ದಾರೆ.
ಮೃತರನ್ನು ಸಿಂಕು (10), ಅಭಿ (8), ಸೋನು (7), ಆರತಿ (5) ಎಂದು ಗುರುತಿಸಲಾಗಿದ್ದು, ರಿಷವ್ (4) ಮತ್ತು ಅವರ ಅಜ್ಜಿ ಶಾರದಾ ದೇವಿ (75) ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಘಟನೆಯಲ್ಲಿನ ಸಾವುಗಳ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ
ಮುಖ್ಯಮಂತ್ರಿಗಳು ವಿಪತ್ತು ಪರಿಹಾರ ನಿಧಿಯಿಂದ ಮೃತರ ಕುಟುಂಬಕ್ಕೆ ೪ ಲಕ್ಷ ರೂ.ಗಳ ಪರಿಹಾರ ಮೊತ್ತವನ್ನು ಘೋಷಿಸಿದ್ದಾರೆ ಮತ್ತು ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆಯನ್ನು ಖಚಿತಪಡಿಸಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.