News Kannada
Thursday, December 01 2022

ಉತ್ತರ ಪ್ರದೇಶ

ಅಜಂಗಢ: 8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ, ಆರೋಪಿಯ ಬಂಧನ

Model files false complaint of sexual harassment by ride app driver
Photo Credit : Pixabay

ಅಜಂಗಢ: ಉತ್ತರ ಪ್ರದೇಶದ ಅಜಂಗಡ ಜಿಲ್ಲೆಯಲ್ಲಿ 8 ವರ್ಷದ ಬಾಲಕಿಯ ಮೇಲೆ ಆಕೆಯ 22 ವರ್ಷದ ನೆರೆಮನೆಯವನೇ ಅತ್ಯಾಚಾರವೆಸಗಿ ನಂತರ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಆರೋಪಿ ಲಕ್ಷ್ಮಣ್ ನನ್ನು ಬಂಧಿಸಲಾಗಿದೆ.

ಗ್ರಾಮದ ಅಪ್ರಾಪ್ತ ಬಾಲಕಿಯ ಮನೆಯಿಂದ ಸುಮಾರು 100 ಮೀಟರ್ ದೂರದಲ್ಲಿ ವಾಸಿಸುವ ಆರೋಪಿ, ಮಿಠಾಯಿ ನೀಡುವ ನೆಪದಲ್ಲಿ ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದಾನೆ ಎಂದು ಪ್ರಾಥಮಿಕ ತನಿಖೆಯ ವೇಳೆ ಪೊಲೀಸರು ಕಂಡುಕೊಂಡಿದ್ದಾರೆ ಎಂದು ಅಜಮ್ ಘರ್ ಎಸ್ಪಿ ಅನುರಾಗ್ ಆರ್ಯ ತಿಳಿಸಿದ್ದಾರೆ. ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ನಂತರ, ಆರೋಪಿ ಅವಳ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ.

ಸ್ಥಳೀಯ ಹಿಟ್ಟಿನ ಗಿರಣಿಯಲ್ಲಿ ಕೆಲಸ ಮಾಡುವ ಲಕ್ಷ್ಮಣ್ ಮಾದಕ ವ್ಯಸನಿ ಎಂಬುದು ತನಿಖೆಯ ವೇಳೆ ಕಂಡುಬಂದಿದೆ .

ಬಾಲಕಿ ಮನೆಗೆ ಹಿಂದಿರುಗದಿದ್ದಾಗ, ಅವಳ ಕುಟುಂಬ ಸದಸ್ಯರು ಅವಳನ್ನು ಹುಡುಕಲು ಪ್ರಾರಂಭಿಸಿದರು ಮತ್ತು ಅವಳ ದೇಹವು ನಿರ್ಜನ ಪ್ರದೇಶದಲ್ಲಿ ಪತ್ತೆಯಾಗಿದೆ.

ಅಜಂಗಢ ವಲಯದ ಡಿಐಜಿ ಅಖಿಲೇಶ್ ಕುಮಾರ್ ಮತ್ತು ಎಸ್ಪಿ ನೇತೃತ್ವದ ಪೊಲೀಸ್ ತಂಡವು ಘಟನೆಯ ತನಿಖೆಗಾಗಿ ವಿಧಿವಿಜ್ಞಾನ ತಜ್ಞರೊಂದಿಗೆ ಸ್ಥಳಕ್ಕೆ ತಲುಪಿದೆ.

ಸಾವಿನ ನಿಖರ ಕಾರಣವನ್ನು ಕಂಡುಹಿಡಿಯಲು ನಾವು ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದೇವೆ ಎಂದು ಎಸ್ಪಿ ಹೇಳಿದರು.

See also  ಹೈದರಾಬಾದ್: ಶೀಘ್ರದಲ್ಲೇ ರಾಷ್ಟ್ರೀಯ ಪಕ್ಷ ಆರಂಭಿಸಲಿರುವ ಕೆಸಿಆರ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

30409

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು