ಬಹ್ರೈಚ್, ನ.30: ಬಹ್ರೈಚ್ ಜಿಲ್ಲೆಯ ತಪ್ಪೆ ಸಿಪಾಹ್ ಪ್ರದೇಶದಲ್ಲಿ ಬುಧವಾರ ಬಸ್ ಮತ್ತು ಟ್ರಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಕನಿಷ್ಠ ಆರು ಮಂದಿ ಸಾವನ್ನಪ್ಪಿದ್ದು, 15 ಮಂದಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ. ಅಪಘಾತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ.
ಜಿಲ್ಲಾ ಮ್ಯಾಜಿಸ್ಟ್ರೇಟ್ ದಿನೇಶ್ ಚಂದ್ರ ಅವರು, ಟ್ರಕ್ ರಾಂಗ್ ಸೈಡ್ ನಿಂದ ಬರುತ್ತಿದ್ದಾಗ ರಸ್ತೆ ಸಾರಿಗೆ ಬಸ್ ಗೆ ಡಿಕ್ಕಿ ಹೊಡೆದಿದೆ ಎಂದು ಮೇಲ್ನೋಟಕ್ಕೆ ತೋರುತ್ತದೆ ಎಂದು ಹೇಳಿದರು.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಾವಿನ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ ಮತ್ತು ಗಾಯಗೊಂಡವರಿಗೆ ಸರಿಯಾದ ಚಿಕಿತ್ಸೆಯನ್ನು ನೀಡಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.