ಶಾಮ್ಲಿ, ಮಾ.14: ನಿರ್ಮಾಣ ಹಂತದ ಕಟ್ಟಡವೊಂದರಲ್ಲಿ ನಿರ್ಮಿಸುತ್ತಿದ್ದ ಕಬ್ಬಿಣದ ಕಂಬಕ್ಕೆ ಹೈಟೆನ್ಷನ್ ಕೇಬಲ್ ತಗುಲಿ ಇಬ್ಬರು ಕಾರ್ಮಿಕರು ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿದ್ದಾರೆ.
ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಬಲ್ವಾ ಗ್ರಾಮದಲ್ಲಿ ಸೋಮವಾರ ಈ ಘಟನೆ ನಡೆದಿದೆ. ಸ್ಥಳೀಯರ ಪ್ರಕಾರ, ಕಂಬವು ಹೈಟೆನ್ಷನ್ ವಿದ್ಯುತ್ ಮಾರ್ಗದ ಸಂಪರ್ಕಕ್ಕೆ ಬಂದಾಗ ಭಾರಿ ಸ್ಫೋಟ ಸಂಭವಿಸಿದೆ.
ಕಾರ್ಮಿಕರಾದ ಮೊಹಮ್ಮದ್ ಇಕ್ಬಾಲ್ (42) ಮತ್ತು ನದೀಮ್ ಅಹ್ಮದ್ (26) ಪ್ರಜ್ಞೆ ತಪ್ಪಿ ಬಿದ್ದಿದ್ದು, ಅವರನ್ನು ಗ್ರಾಮಸ್ಥರು ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದರು.
ಪ್ರಾಥಮಿಕ ತನಿಖೆಯ ಆಧಾರದ ಮೇಲೆ, ನಿರ್ಲಕ್ಷ್ಯದಿಂದಾಗಿ ಅಪಘಾತ ಸಂಭವಿಸಿದೆ ಎಂದು ಎಸ್ಎಚ್ಒ ನೇಮ್ ಚಂದ್ ಹೇಳಿದ್ದಾರೆ. ನಾವು ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದೇವೆ. ಈ ಬಗ್ಗೆ ಇದುವರೆಗೂ ಯಾವುದೇ ದೂರು ದಾಖಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.