ತಾನಕ್ಪುರ, ಮಾ.23: ಉತ್ತರಾಖಂಡದ ಚಂಪಾವತ್ ಜಿಲ್ಲೆಯ ತುಲಿಗಡ್ ಪಾರ್ಕಿಂಗ್ ಪ್ರದೇಶದಲ್ಲಿ ಗುರುವಾರ ಬಸ್ಸೊಂದು ಜನಸಮೂಹಕ್ಕೆ ಡಿಕ್ಕಿ ಹೊಡೆದ ಪರಿಣಾಮ ಐವರು ಭಕ್ತರು ಸಾವನ್ನಪ್ಪಿದ್ದಾರೆ ಮತ್ತು ಇತರ ಎಂಟು ಮಂದಿ ಗಾಯಗೊಂಡಿದ್ದಾರೆ.
ಮೂಲಗಳ ಪ್ರಕಾರ, ಉತ್ತರ ಪ್ರದೇಶದ ಬಹ್ರೈಚ್ ಜಿಲ್ಲೆಯ ನಿವಾಸಿಗಳಾದ ಜನರು ತುಲಿಗಡ್ ನಲ್ಲಿ ನಡೆಯುವ ವಾರ್ಷಿಕ ಮಾ ಪೂರ್ಣಗಿರಿ ಜಾತ್ರೆಗೆ ಭೇಟಿ ನೀಡಿದ್ದರು ಮತ್ತು ಹಿಂತಿರುಗಲು ಬಸ್ ಗಾಗಿ ಕಾಯುತ್ತಿದ್ದರು.
ಅಪಘಾತದ ನಂತರ, ಗಾಯಗೊಂಡವರನ್ನು ತನಕ್ಪುರ ಉಪ-ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ಅವರಲ್ಲಿ ಐವರು ಸಾವನ್ನಪ್ಪಿದ್ದಾರೆ.
ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.