News Kannada
Saturday, March 02 2024
ಉತ್ತರಖಂಡ

ಸುರಂಗದಲ್ಲಿ ಸಿಲುಕಿದ ಕಾರ್ಮಿಕರು ಏಮ್ಸ್‌ ಆಸ್ಪತ್ರೆಗೆ ಸ್ಥಳಾಂತರ

Workers shifted to AIIMS
Photo Credit : News Kannada

ಉತ್ತರಕಾಶಿ: ಕಳೆದ 17 ದಿನಗಳಿಂದ ಉತ್ತರಕಾಶಿಯ ಸಿಲ್ಕ್ಯಾರಾದ ಸುರಂಗದಲ್ಲಿ ಸಿಲುಕಿಕೊಂಡಿದ್ದ ಕಾರ್ಮಿಕರನ್ನು ಸುರಕ್ಷಿತವಾಗಿ ಹೊರತರಲಾಗಿದೆ. ಇದೀಗ 41 ಕಟ್ಟಡ ಕಾರ್ಮಿಕರನ್ನು ಭಾರತೀಯ ವಾಯುಪಡೆಯ ಚಿನೂಕ್‌ ಹೆಲಿಕಾಫ್ಟರ್‌ ನಲ್ಲಿ ಋಷಿಕೇಶದ ಏಮ್ಸ್‌ಗೆ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಯಾವುದೇ ಕಾರ್ಮಿಕರಿಗೆ ಬಾಹ್ಯ ಗಾಯಗಳಿಲ್ಲದಿದ್ದರೂ, ಮುನ್ನೆಚ್ಚರಿಕೆ ಕ್ರಮವಾಗಿ ಅವರನ್ನು ಪ್ರಧಾನ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿದೆ. ಅಲ್ಲಿ ಪರೀಕ್ಷೆಗಳನ್ನು ನಡೆಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ನಡುವೆ ಸಿಲ್ಕ್ಯಾರಾ ಸುರಂಗದಿಂದ ರಕ್ಷಿಸಲ್ಪಟ್ಟ 41 ಕಾರ್ಮಿಕರೊಂದಿಗೆ ದೂರವಾಣಿ ಮೂಲಕ ಪ್ರಧಾನಿ ನರೇಂದ್ರ ಮೋದಿ ಮಾತುಕತೆ ನಡೆಸಿದರು. ಒಂದೇ ಕಡೆಯಿದ್ದ ಎಲ್ಲಾ ಕಾರ್ಮಿಕರ ಬಳಿ ಮಾತನಾಡಿ, ಆರೋಗ್ಯ ವಿಚಾರಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು