NewsKarnataka
Thursday, November 25 2021

ಪಶ್ಚಿಮ ಬಂಗಾಳ

ಮಮತಾ ಬ್ಯಾನರ್ಜಿ ಸ್ಪರ್ಧಿಸಿರುವ ಭವಾನಿಪುರ ವಿಧಾನಸಭೆ ಕ್ಷೇತ್ರದಲ್ಲಿ ಇಂದು ಮತದಾನ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸ್ಪರ್ಧಿಸಿರುವ ಭವಾನಿಪುರ ವಿಧಾನಸಭೆ ಕ್ಷೇತ್ರದಲ್ಲಿ ಇಂದು ಮತದಾನ ನಡೆಯಲಿದೆ. ಭವಾನಿಪುರ ಸೇರಿದಂತೆ ಪಶ್ಚಿಮ ಬಂಗಾಳದ ಮತ್ತೆರಡು ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯಲಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ.

ದಕ್ಷಿಣ ಕೋಲ್ಕತ್ತ ಭವಾನಿಪುರ, ಮುರ್ಷಿದಾಬಾದ್ ಜಿಲ್ಲೆಯ ಜಂಗೀಪುರ ಮತ್ತು ಸಂಸರ್‌ಗಂಜ್ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಸಿಎಂ ಮಮತಾ ಬ್ಯಾನರ್ಜಿ ಸ್ಪರ್ಧಿಸಿರುವ ಹಿನ್ನೆಲೆ ಎಲ್ಲರ ಗಮನ ಭವಾನಿಪುರದ ಮೇಲಿದೆ.

ಚುನಾವಣೆಗೆ ಬಿಗಿ ಭದ್ರತೆ ಒದಗಿಸಲು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ ೨೦ ಹೆಚ್ಚುವರಿ ತಂಡವನ್ನು ಕ್ಷೇತ್ರದಲ್ಲಿ ನಿಯೋಜಿಸಲಾಗಿದೆ. ಭವಾನಿಪುರ ಉಪಚುನಾವಣೆಯಲ್ಲಿ ಬಿಜೆಪಿಯ ಪ್ರಿಯಾಂಕಾ ಟಿಬ್ರೂವಾಲ್ ಮತ್ತು ಸಿಪಿಐನ ಶ್ರೀಜೀಬ್ ಬಿವಾಸ್, ಮಮತಾ ಬ್ಯಾನರ್ಜಿ ಅವರೊಂದಿಗೆ ಸೆಣಸಲಿದ್ದಾರೆ. ಇವಿಯಂಗಳ ಸುರಕ್ಷತೆಗಾಗಿ 141 ವಿಶೇಷ ವಾಹನಗಳಿಗೆ ಮತದಾನ ಯಂತ್ರಗಳನ್ನು ಬೆಂಗಾವಲು ಮಾಡಲು ವ್ಯವಸ್ಥೆ ಇದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

Leave a Reply

Your email address will not be published. Required fields are marked *

News Kannada

The most exciting, trusted and preferred news websites of Karnataka and Kannadigas around the world.

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

error: Content is protected !!