ಕೋಲ್ಕತ್ತಾ: ಕೋಲ್ಕತ್ತಾದಲ್ಲಿ 19 ವರ್ಷದ ಮಾಡೆಲ್ ಬಾಡಿಗೆ ಮನೆಯ ಸೀಲಿಂಗ್ ಫ್ಯಾನ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಭಾನುವಾರ ಪತ್ತೆಯಾಗಿದ್ದಾರೆ.
ಪೂಜಾ ಸರ್ಕಾರ್(19) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಘಟನಾ ಸ್ಥಳದಲ್ಲಿ ಯಾವುದೇ ಪತ್ರ ಪತ್ತೆಯಾಗಿಲ್ಲದ ಕಾರಣ, ಇದು ಆತ್ಮಹತ್ಯೆಯೋ ಅಥವಾ ಕೊಲೆಯ ಎಂದು ಇನ್ನೂ ತಿಳಿದುಬಂದಿಲ್ಲ. ಹೀಗಾಗಿ ಪ್ರಕರನ ದಾಖಲಿಸಿಕೊಂಡು ತನಿಖೆ ಮುಂದುವರೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಉತ್ತರ 24 ಪರಗಣ ಮೂಲದ ಸರ್ಕಾರ್ ಅವರು ಗೋಬರ್ದಂಗ ಹಿಂದೂ ಕಾಲೇಜಿನಲ್ಲಿ ವ್ಯಾಸಂಗ ಮಾಡಿದರು ಎಂದು ವರದಿಗಳು ತಿಳಿಸಿವೆ.