News Kannada
Friday, February 23 2024
ಪಶ್ಚಿಮ ಬಂಗಾಳ

ಪಶ್ಚಿಮ ಬಂಗಾಳ: ವಿದ್ಯುತ್‌ ಸ್ಪರ್ಶವಾಗಿ 10 ಕನ್ವರ್‌ ಯಾತ್ರಾರ್ಥಿಗಳು ಸಾವು

West Bengal: 10 killed after vehicle carrying Kanwar pilgrims electrocuted
Photo Credit : Twitter

ಪಶ್ಚಿಮ ಬಂಗಾಳ: ಕನ್ವರ್‌ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ವಾಹನಕ್ಕೆ ವಿದ್ಯುತ್‌ ಸ್ಪರ್ಶವಾಗಿದ್ದು ವಾಹನದಲ್ಲಿದ್ದ ಸುಮಾರು 10 ಜನ ಕನ್ವರ್‌ ಯಾತ್ರಾರ್ಥಿಗಳು ಸಾವನ್ನಪ್ಪಿದ್ದು 19ಕ್ಕೂ ಹೆಚ್ಚು ಜನರಿಗೆ ಗಾಯಗೊಂಡಿರುವ ಘಟನೆ ನಡೆದಿದೆ.

ಪಶ್ಚಿಮ ಬಂಗಾಳದ ಕೂಚ್ ಬೆಹಾರ್‌ನಲ್ಲಿ ಭಾನುವಾರ ತಡರಾತ್ರಿ ಘಟನೆ ನಡೆದಿದ್ದು ಜಲ್ಪೇಶ್‌ಗೆ ತೆರಳುತ್ತಿದ್ದ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಪಿಕಪ್ ಟ್ರಕ್ ವಿದ್ಯುತ್ ಸ್ಪರ್ಶಕ್ಕೆ ತುತ್ತಾಗಿದೆ.

ಪ್ರಯಾಣಿಕರನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, 16 ಜನರನ್ನು ಚಿಕಿತ್ಸೆಗಾಗಿ ಜಲ್ಪೈಗುರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ 10 ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ವಾಹನದಲ್ಲಿದ್ದ ಡಿಜೆ ಸಿಸ್ಟಂನ ಜನರೇಟರ್‌ನ ವೈರಿಂಗ್‌ನಿಂದ ಈ ಘಟನೆ ನಡೆದಿರಬಹುದು ಎಂದು ಊಹಿಸಲಾಗಿದೆ. ಎಲ್ಲಾ ಪ್ರಯಾಣಿಕರು ಸಿತಾಲ್ಕುಚಿ ಪೊಲೀಸ್ ಠಾಣೆಗೆ ಸೇರಿದವರಾಗಿದ್ದು, ದುರಂತ ಘಟನೆಯ ಬಗ್ಗೆ ಅವರ ಕುಟುಂಬಗಳಿಗೆ ಮಾಹಿತಿ ರವಾನಿಸಲಾಗಿದೆ.

ವಾಹನವನ್ನು ವಶಪಡಿಸಿಕೊಳ್ಳಲಾಗಿದೆ ಆದರೆ ಚಾಲಕ ಪರಾರಿಯಾಗಿದ್ದಾನೆ. ಹಿರಿಯ ಅಧಿಕಾರಿಗಳು ಸ್ಥಳದಲ್ಲಿದ್ದಾರೆ. ಪೊಲೀಸರು ಪರಿಹಾರ ಮತ್ತು ಅಗತ್ಯವಿರುವ ಸಹಾಯ ಕಾರ್ಯದಲ್ಲಿ ನಿರತರಾಗಿದ್ದು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಮೂಲಗಳೂ ವರದಿ ಮಾಡಿವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು