News Kannada
Friday, February 23 2024
ವಿದೇಶ

12 ಇಸ್ರೇಲಿ ಒತ್ತೆಯಾಳುಗಳನ್ನು ಬಿಡುಗಡೆ ಮಾಡಿದ ಹಮಾಸ್

ಕದನ ವಿರಾಮದ ಭಾಗವಾಗಿ ಈ ಹಿಂದೆ ಇಸ್ರೇಲ್ ಹಾಗೂ ಹಮಾಸ್ ಒಪ್ಪಿಕೊಂಡಂತೆ ಒತ್ತೆಯಾಳುಗಳು ಹಾಗೂ ಪ್ಯಾಲೆಸ್ತೀನಿಯನ್ ಕೈದಿಗಳ ಬಿಡುಗಡೆಯಾಗುತ್ತಿದೆ. 12 ಇಸ್ರೇಲಿಯನ್ನರನ್ನು ಹಮಾಸ್ ಬಿಡುಗಡೆ ಮಾಡಿದ್ದರೆ, ಇಸ್ರೇಲ್ 30 ಮಂದಿ ಪ್ಯಾಲೆಸ್ತೀನ್ ಕೈದಿಗಳನ್ನು ಬಿಡುಗಡೆ ಮಾಡಿದೆ.
Photo Credit : News Kannada

ಗಾಜಾ: ಕದನ ವಿರಾಮದ ಭಾಗವಾಗಿ ಈ ಹಿಂದೆ ಇಸ್ರೇಲ್ ಹಾಗೂ ಹಮಾಸ್ ಒಪ್ಪಿಕೊಂಡಂತೆ ಒತ್ತೆಯಾಳುಗಳು ಹಾಗೂ ಪ್ಯಾಲೆಸ್ತೀನಿಯನ್ ಕೈದಿಗಳ ಬಿಡುಗಡೆಯಾಗುತ್ತಿದೆ. 12 ಇಸ್ರೇಲಿಯನ್ನರನ್ನು ಹಮಾಸ್ ಬಿಡುಗಡೆ ಮಾಡಿದ್ದರೆ, ಇಸ್ರೇಲ್ 30 ಮಂದಿ ಪ್ಯಾಲೆಸ್ತೀನ್ ಕೈದಿಗಳನ್ನು ಬಿಡುಗಡೆ ಮಾಡಿದೆ. ಅಕ್ಟೋಬರ್ 7 ರಂದು ಇಸ್ರೇಲ್ ಮೇಲಿನ ದಾಳಿಯ ಸಮಯದಲ್ಲಿ ಹಮಾಸ್ ಹೋರಾಟಗಾರರು ಸುಮಾರು 240 ಜನರನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದರು.

ಅಕ್ಟೋಬರ್ 7 ರಂದು ಹಮಾಸ್ ಉಗ್ರರು ಇಸ್ರೇಲ್​ ಮೇಲೆ 5 ಸಾವಿರಕ್ಕೂ ಅಧಿಕ ರಾಕೆಟ್​ಗಳಿಂದ ದಾಳಿ ನಡೆಸಿದ್ದರು. ಅದಕ್ಕೆ ಪ್ರತಿಯಾಗಿ ಇಸ್ರೇಲ್ ಗಾಜಾದಲ್ಲಿ ದಾಳಿ ಆರಂಭಿಸಿತ್ತು.

ಹಮಾಸ್​ನ್ನು ಹತ್ತಿಕ್ಕುವವರೆಗೂ ಯುದ್ಧವನ್ನು ನಿಲ್ಲಿಸುವುದಿಲ್ಲ ಎಂದು ಇಸ್ರೇಲ್ ಹೇಳಿತ್ತು. ಅಷ್ಟೇ ಅಲ್ಲದೆ, ಯುದ್ಧವನ್ನು ನಾವು ಪ್ರಾರಂಭಿಸಿಲ್ಲ ಆದರೆ ಅಂತ್ಯ ನಮ್ಮಿಂದಲೇ ಆಗಲಿದೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ಹೇಳಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು