News Karnataka Kannada
Friday, April 19 2024
Cricket
ವಿದೇಶ

ಮೋದಿ ಭೇಟಿ ನಡುವೆಯೇ ಭಾರತದ ವಿದ್ಯಾರ್ಥಿಗಳಿಗೆ ಪ್ರವೇಶವಿಲ್ಲ ಎಂದ ಆಸ್ಟ್ರೇಲಿಯಾ: ಕಾರಣ ಏನು ಗೊತ್ತಾ

No entry for Indian students amid PM Modi's visit to M Australia: Know why
Photo Credit : IANS

ಮೆಲ್ಬೋರ್ನ್: ವೀಸಾ ಅರ್ಜಿಗಳಲ್ಲಿ ಮೋಸದ ಕಾರಣಕ್ಕೆ ಆಸ್ಟ್ರೇಲಿಯಾದ ಎರಡು ವಿಶ್ವವಿದ್ಯಾಲಯಗಳು ಭಾರತದ ಕೆಲವು ರಾಜ್ಯಗಳ ವಿದ್ಯಾರ್ಥಿಗಳ ಪ್ರವೇಶಾತಿಯನ್ನು ನಿಷೇಧಿಸಿವೆ ಎಂದು ಮಾಧ್ಯಮ ವರದಿಯೊಂದು ತಿಳಿಸಿದೆ.

ವಿಕ್ಟೋರಿಯಾದಲ್ಲಿನ ಫೆಡರೇಶನ್ ವಿಶ್ವವಿದ್ಯಾಲಯ ಮತ್ತು ನ್ಯೂ ಸೌತ್ ವೇಲ್ಸ್‌ನ ವೆಸ್ಟರ್ನ್ ಸಿಡ್ನಿ ವಿಶ್ವವಿದ್ಯಾಲಯವು ಕಳೆದ ವಾರ ಶಿಕ್ಷಣ ಏಜೆಂಟರಿಗೆ ಪತ್ರ ಬರೆದಿದ್ದು, ಇನ್ನು ಮುಂದೆ ಪಂಜಾಬ್, ಹರಿಯಾಣ, ಉತ್ತರಾಖಂಡ ಮತ್ತು ಉತ್ತರ ಪ್ರದೇಶ ಮತ್ತು ಜಮ್ಮು ಮತ್ತು ಕಾಶ್ಮೀರದ ಕೇಂದ್ರಾಡಳಿತ ಪ್ರದೇಶದಿಂದ ವಿದ್ಯಾರ್ಥಿಗಳನ್ನು ನೇಮಿಸಿಕೊಳ್ಳದಂತೆ ಸೂಚನೆ ನೀಡಿದೆ ಎಂದು ವರದಿಗಳು ತಿಳಿಸಿವೆ. ಪ್ರಧಾನಿ ಮೋದಿ ಅವರು ಆಸ್ಟೇಲಿಯಾಕ್ಕೆ ಭೇಟಿ ನೀಡಿದ್ದು, ಆಸ್ಟೇಲಿಯಾದಲ್ಲಿ ಸಾವಿರಾರು ಭಾರತೀಯ ವಿದ್ಯಾರ್ಥಿಗಳು ಅಧ್ಯಯನ ನಡೆಸುತ್ತಿದ್ದಾರೆ ಎಂದು ಹೇಳಿಕೆ ನೀಡುರವ ಮಧ್ಯೆಯ ಈ ಬೆಳವಣಿಗೆ ನಡೆದಿದೆ.

ಅಲ್ಲದೆ, ವಿದ್ಯಾರ್ಥಿಗಳು, ಪದವೀಧರರು, ಸಂಶೋಧಕರು ಮತ್ತು ವ್ಯಾಪಾರಸ್ಥರ ವಿನಿಮಯವನ್ನು ಉತ್ತೇಜಿಸಲು ಎರಡು ರಾಷ್ಟ್ರಗಳು ಹಲವು ಒಪ್ಪಂದಗಳಿಗೆ ಸಹಿ ಹಾಕಿವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು