News Kannada
Friday, February 23 2024
ವಿದೇಶ

ಶಾಕಿಂಗ್‌ ನ್ಯೂಸ್‌: ಮರಳು ದಂಧೆ ಮೇಲೆ ದಾಳಿ ಮಾಡಿದ್ದ ಪೊಲೀಸ್‌ ಅಧಿಕಾರಿಯ ಹತ್ಯೆ

Shocking news: The police officer who attacked the sand racket was killed
Photo Credit : News Kannada

ಪಾಟ್ನಾ: ಅಕ್ರಮ ಮರಳು ಸಾಗಾಣಿಕೆ ದಂಧೆಯನ್ನು ತಡೆಯಲು ಹೋಗಿದ್ದ ಪೊಲೀಸ್‌ ಅಧಿಕಾರಿಯ ಮೇಲೆಯೆ ಟ್ರ್ಯಾಕ್ಟರ್‌ ಹರಿಸಿ ಹತ್ಯೆ ಮಾಡಿರುವ ಘಟನೆ ಬಿಹಾರದ ಜಮುಯಿಯ ಮಹಿಲಿ ತಾಂಡ್‌ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಮಂಗಳವಾರ ಬೆಳಗ್ಗೆ ಜಮಯಿ ಜಿಲ್ಲೆಯ ಗರ್ಹಿ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಮರಳು ಮಾಫಿಯಾ ನಡೆಯುತ್ತಿತ್ತು. ಈ ಸಂಬಂಧ ಮಾಹಿತಿ ಪಡೆದ ಪೊಲೀಸರು ಮರಳು ಮಾಫಿಯಾ ಅಡ್ಡೆಗೆ ದಾಳಿ ನಡೆಸಿದ್ದರು. ಕಾರ್ಯಾಚರಣೆಯಲ್ಲಿ ಸಬ್‌ ಇನ್‌ ಸ್ಪೆಕ್ಟರ್‌ ಪ್ರಭಾತ್‌ ರಂಜನ್‌ ಕೂಡ ಇದ್ದರು. ಮರಳು ತುಂಬಿದ ಟ್ರ್ಯಾಕ್ಟರ್‌ ವೊಂದನ್ನು ತಡೆಯಲು ಹೋದಾಗ ಚಾಲಕ ಅವರ ಮೇಲೆಯೆ ಟ್ರ್ಯಾಕ್ಟರ್‌ ಹರಿಸಿ ಸ್ಥಳದಿಂದ ಪರಾರಿಯಾಗಿದ್ದಾನೆ. ಮತ್ತೊಬ್ಬ ಪೊಲೀಸ್‌ ಅಧಿಕಾರಿ ರಾಜೇಶ್‌ ಕುಮಾರ್‌ ಸಾವೋ ಗಾಯಗೊಂಡಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು