News Karnataka Kannada
Wednesday, April 24 2024
Cricket
ವಿದೇಶ

ಇಂಡೊನೇಷ್ಯಾ: ಜ್ವಾಲಾಮುಖಿ ಸ್ಫೋಟಕ್ಕೆ 13 ಸಾವು

New Project 2021 12 05t123810.870
Photo Credit :

ಜಕಾರ್ತ: ಇಂಡೊನೇಷ್ಯಾದ ಪೂರ್ವ ಜಾವಾ ಪ್ರಾಂತ್ಯದ ಮೌಂಟ್ ಸಿಮೇರುವಿನಲ್ಲಿ ಶನಿವಾರ ಜ್ವಾಲಾಮುಖಿ ಸ್ಫೋಟಗೊಂಡು 13 ಮಂದಿ ಮೃತಪಟ್ಟಿದ್ದಾರೆ. ಸಿಮೇರು ಸಮೀಪದ ಲುಮಾಜಾಂಗ್‌ನ ಕೆರೊಬೊಕನ್ ಗ್ರಾಮದಲ್ಲಿ 300ಕ್ಕೂ ಹೆಚ್ಚು ಕುಟುಂಬಗಳು ವಾಸವಿದ್ದವು. ಈ ಪ್ರದೇಶದ ಮನೆಗಳು ಜ್ವಾಲಾಮುಖಿ ಸ್ಫೋಟಗೊಂಡು ಲಾವಾ ಹರಿದ ಪರಿಣಾಮ ಬಹುತೇಕ ನಾಶವಾಗಿವೆ. ಹತ್ತಾರು ಮಂದಿ ಗಾಯಗೊಂಡಿದ್ದು, ಹಲವರು ನಾಪತ್ತೆಯಾಗಿದ್ದಾರೆ.

ಸಮೀಪದ ಗ್ರಾಮಗಳ ನಿವಾಸಿಗಳೂ ಭೀತಿಯಿಂದ ಮನೆಬಿಟ್ಟು ಇತರೆಡೆಗಳಿಗೆ ತೆರಳಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಕೆರೊಬೊಕನ್‌ನಲ್ಲಿ ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದ್ದು, ಈವರೆಗೆ 13 ಮೃತದೇಹಗಳು ಪತ್ತೆಯಾಗಿವೆ.41 ಮಂದಿಗೆ ಗಂಭೀರ ಗಾಯಗಳಾಗಿವೆ ಎಂದು ಲುಮಾಜಾಂಗ್‌ ಅಧಿಕಾರಿಗಳು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು