News Kannada
Sunday, September 25 2022

ವಿದೇಶ

ಅನಾವರಣಗೊಂಡ ಕೆಲವೇ ಗಂಟೆಗಳಲ್ಲಿ ಗಾಂಧೀಜಿ ಪ್ರತಿಮೆ ಧ್ವಂಸ: ಇದು ಅವಮಾನಕರ ಎಂದ ಆಸ್ಟ್ರೇಲಿಯಾ ಪ್ರಧಾನಿ - 1 min read

Photo Credit :

ಭಾರತ ಸರ್ಕಾರವು ಆಸ್ಟ್ರೇಲಿಯಕ್ಕೆ ಉಡುಗೊರೆಯಾಗಿ ನೀಡಿದ್ದ ಮಹಾತ್ಮ ಗಾಂಧಿಯವರ ಬೃಹತ್ ಗಾತ್ರದ ಕಂಚಿನ ಪ್ರತಿಮೆಯನ್ನು ಮೆಲ್ಬೋರ್ನ್​ನಲ್ಲಿ ಧ್ವಂಸಗೊಳಿಸಲಾಗಿದೆ.

ಈ ಘಟನೆಗೆ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್ ಬೇಸರ ವ್ಯಕ್ತಪಡಿಸಿದ್ದು, ಇದು ತೀರಾ ‘ಅವಮಾನಕರ’ ಎಂದು ಖಂಡಿಸಿದ್ದಾರೆ. ಇದರಿಂದ ಭಾರತ-ಆಸ್ಟ್ರೇಲಿಯನ್ ಸಮುದಾಯದಲ್ಲಿ ಆಘಾತ ಉಂಟಾಗಿದೆ.

ಭಾರತದ 75 ವರ್ಷಗಳ ಸ್ವಾತಂತ್ರ್ಯದ ಆಚರಣೆಯ ಅಂಗವಾಗಿ ಪ್ರಧಾನ ಮಂತ್ರಿ ಮಾರಿಸನ್ ಅವರು ಭಾರತದ ಕಾನ್ಸುಲ್ ಜನರಲ್ ರಾಜ್ ಕುಮಾರ್ ಮತ್ತು ಇತರ ಆಸ್ಟ್ರೇಲಿಯಾದ ನಾಯಕರೊಂದಿಗೆ ಶುಕ್ರವಾರ ರೌವಿಲ್ಲೆಯಲ್ಲಿರುವ ಆಸ್ಟ್ರೇಲಿಯಾದ ಭಾರತೀಯ ಸಮುದಾಯ ಕೇಂದ್ರದಲ್ಲಿ ಗಾಂಧಿ ಪ್ರತಿಮೆಯನ್ನು ಅನಾವರಣಗೊಳಿಸಿದ ಕೆಲವೇ ಗಂಟೆಗಳಲ್ಲಿ ಈ ಘಟನೆ ನಡೆದಿದೆ.

ಗಾಂಧೀಜಿಗೆ ಈ ರೀತಿಯ ಅಗೌರವ ತೋರಿರುವವರು ಬಹಳ ಅವಮಾನಕರ ಮತ್ತು ಅತ್ಯಂತ ನಿರಾಶಾದಾಯಕವಾಗಿದೆ ಎಂದು ಮಾರಿಸನ್ ಬೇಸರ ವ್ಯಕ್ತಪಡಿಸಿದ್ದಾರೆ. ವಿಶ್ವದಲ್ಲೇ ಅತ್ಯಂತ ಬಹುಸಂಸ್ಕೃತಿ ಮತ್ತು ವಲಸಿಗರು ಹೆಚ್ಚಾಗಿರುವ ರಾಷ್ಟ್ರವಾಗಿರುವ ಆಸ್ಟ್ರೇಲಿಯಾದಲ್ಲಿ ಸಾಂಸ್ಕೃತಿಕ ಸ್ಮಾರಕಗಳ ಮೇಲಿನ ದಾಳಿಯನ್ನು ಎಂದಿಗೂ ಸಹಿಸಲಾಗದು ಎಂದು ಅವರು ಹೇಳಿದ್ದಾರೆ. ಹಾಗೇ, ಈ ಘಟನೆಗೆ ಕಾರಣರಾದವರು ಆಸ್ಟ್ರೇಲಿಯನ್ ಭಾರತೀಯ ಸಮುದಾಯಕ್ಕೆ ಅಗೌರವ ತೋರಿದ್ದಾರೆ. ಇದರಿಂದ ದೇಶವೇ ತಲೆ ತಗ್ಗಿಸುವಂತಾಗಿದೆ ಎಂದು ಅವರು ಹೇಳಿದ್ದಾರೆ.

ಈ ಪ್ರತಿಮೆಯನ್ನು ಭಾರತ ಸರ್ಕಾರ ಉಡುಗೊರೆಯಾಗಿ ನೀಡಿತ್ತು. ಈ ಘಟನೆಯಿಂದ ಭಾರತೀಯ ಸಮುದಾಯವು ತುಂಬಾ ಆಘಾತಕ್ಕೊಳಗಾಗಿದೆ ಮತ್ತು ದುಃಖಕ್ಕೊಳಗಾಗಿದೆ. ಜನರು ಇಂತಹ ಕೀಳು ವಿಧ್ವಂಸಕ ಕೃತ್ಯವನ್ನು ಏಕೆ ಮಾಡುತ್ತಾರೆಂದು ನನಗೆ ಅರ್ಥವಾಗುತ್ತಿಲ್ಲ ಎಂದು ವಿಕ್ಟೋರಿಯಾದ ಭಾರತೀಯ ಸಂಘಗಳ ಒಕ್ಕೂಟದ ಅಧ್ಯಕ್ಷ ಸೂರ್ಯ ಪ್ರಕಾಶ್ ಸೋನಿ ಅಸಮಾಧಾನ ಹೊರಹಾಕಿದ್ದಾರೆ.

ಈ ಬಗ್ಗೆ ಆಸ್ಟ್ರೇಲಿಯಾ ಇಂಡಿಯಾ ಕಮ್ಯುನಿಟಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ವಾಸನ್ ಶ್ರೀನಿವಾಸನ್ ಮಾತನಾಡಿ, ಗಾಂಧಿ ಪ್ರತಿಮೆಯನ್ನು ಅನಾವರಣಗೊಳಿಸಿದ 24 ಗಂಟೆಗಳಲ್ಲಿ ಯಾರೋ ಒಬ್ಬರು ಅದನ್ನು ಧ್ವಂಸಗೊಳಿಸಲು ಪ್ರಯತ್ನಿಸಿರುವುದು ನನಗೆ ಬೇಸರ ತಂದಿದೆ. ಅವರು ಗಾಂಧೀಜಿ ಪ್ರತಿಮೆಯ ತಲೆ ಕತ್ತರಿಸಲು ಪ್ರಯತ್ನಿಸಿದ್ದರು ಎಂದು ತಿಳಿಸಿದ್ದಾರೆ.

See also  ಮೆಕ್ಸಿಕೋದಲ್ಲಿ ಸಭೆಯ ಮೇಲೆ ಗುಂಡಿನ ದಾಳಿ, 19 ಜನ ಬಲಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

44
News Kannada

The most exciting, trusted and preferred news websites of Karnataka and Kannadigas around the world.

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು