News Kannada
Saturday, December 10 2022

ವಿದೇಶ

ಬ್ರಿಟನ್ ನಲ್ಲಿ ಕಳೆದ 24ಗಂಟೆಗಳಲ್ಲಿ 88,376 ಕೋವಿಡ್ ಸೋಂಕು ಪ್ರಕರಣ ಪತ್ತೆ

Photo Credit :

ಬ್ರಿಟನ್ : ಕೋವಿಡ್ ನ ನೂತನ ರೂಪಾಂತರ ತಳಿ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವ ನಡುವೆಯೇ ಬ್ರಿಟನ್ ನಲ್ಲಿ ಕಳೆದ 24ಗಂಟೆಗಳಲ್ಲಿ 88,376 ಕೋವಿಡ್ 19 ಸೋಂಕು ಪ್ರಕರಣ ಪತ್ತೆಯಾಗಿದೆ ಎಂದು ಶುಕ್ರವಾರ(ಡಿಸೆಂಬರ್ 17) ವರದಿ ತಿಳಿಸಿದೆ.

ಮುಂದಿನ ಕೆಲವು ದಿನಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಭಾರೀ ಹೆಚ್ಚಳವಾಗಲಿದೆ ಎಂದು ಬ್ರಿಟನ್ ನ ಹಿರಿಯ ಆರೋಗ್ಯಾಧಿಕಾರಿ ತಿಳಿಸಿದ್ದಾರೆ. ಬುಧವಾರ ಬ್ರಿಟನ್ ನಲ್ಲಿ 78,610 ಕೋವಿಡ್ ಸೋಂಕು ಪ್ರಕರಣ ಪತ್ತೆಯಾಗಿತ್ತು, ಕಳೆದ ವರ್ಷ ಜನವರಿ 08ರಂದು 68,053 ಪ್ರಕರಣ ವರದಿಯಾಗಿತ್ತು.

ರಾಜಧಾನಿ ಲಂಡನ್ ನಲ್ಲಿಯೂ ಒಂದೇ ದಿನದಲ್ಲಿ 19,294 ಮಂದಿಗೆ ಪಾಸಿಟಿವ್ ವರದಿ ಬಂದಿದೆ. 1,691 ಒಮಿಕ್ರಾನ್ ಸೋಂಕು ಪತ್ತೆಯಾಗಿದ್ದು, ಇದರೊಂದಿಗೆ ದೇಶದಲ್ಲಿ ಒಟ್ಟು 11,708 ಒಮಿಕ್ರಾನ್ ಪ್ರಕರಣಗಳು ವರದಿಯಾಗಿದೆ ಎಂದು ಹೇಳಿದೆ.

ಒಂದೇ ದಿನದಲ್ಲಿ ಕೋವಿಡ್ ಸೋಂಕಿನಿಂದ 146 ಮಂದಿ ಸಾವನ್ನಪ್ಪಿದ್ದಾರೆ. ಒಮಿಕ್ರಾನ್ ಕ್ಷಿಪ್ರವಾಗಿ ಹರಡುತ್ತಿರುವ ಪರಿಣಾಮ ದಿನಂಪ್ರತಿ ಕೋವಿಡ್ ನಿಂದ ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆಯೂ ಹೆಚ್ಚಳವಾಗಿದೆ. ಬ್ರಿಟನ್ ನಲ್ಲಿ ಒಂದೇ ದಿನದಲ್ಲಿ 4,500 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಇಂಗ್ಲೆಂಡ್ ನ ಮುಖ್ಯ ಆರೋಗ್ಯಾಧಿಕಾರಿ ಮಾಹಿತಿ ನೀಡಿದ್ದಾರೆ.

See also  ದೇಶದಲ್ಲಿ ಕಳೆದ 24 ಗಂಟೆಯಲ್ಲಿ 1,79,723 ಜನರಲ್ಲಿ ಸೋಂಕು ದೃಢ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು