News Kannada
Monday, March 20 2023

ವಿದೇಶ

ಯುಕೆಯಲ್ಲಿ ಒಂದೇ ದಿನ 1,06,122 ಮಂದಿಗೆ ಕೊವಿಡ್ ದೃಢ

Photo Credit :

ಲಂಡನ್: ಯುನೈಟೆಡ್ ಕಿಂಗ್‌ಡಮ್ ನಲ್ಲಿ ಕಳೆದ 24 ಗಂಟೆಗಳಲ್ಲಿ ವರದಿ ಆಗಿರುವ ಕೊವಿಡ್-19 ಪ್ರಕರಣಗಳು ಹೊಸ ದಾಖಲೆ ಬರೆದಿವೆ.ಒಂದೇ ದಿನ 1,06,122 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ.

ಇದೇ ಅವಧಿಯಲ್ಲಿ  140 ಮಂದಿ ಪ್ರಾಣ ಬಿಟ್ಟಿದ್ದರೆ, 49,382 ಜನರು ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.

ಕೊವಿಡ್-19 ಹೊಸ ರೂಪಾಂತರಿ ಓಮಿಕ್ರಾನ್ ಸೋಂಕು ಹರಡುವಿಕೆ ಭೀತಿ ನಡುವೆ ಹೊಸ ಪ್ರಕರಣಗಳಲ್ಲಿನ ಏರಿಕೆ ಮತ್ತಷ್ಟು ಆತಂಕವನ್ನು ಸೃಷ್ಟಿಸಿದೆ. ದೇಶದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 1,16,47,473ಕ್ಕೆ ಏರಿಕೆಯಾಗಿದ್ದು, ಈವರೆಗೂ 1,47,573 ಮಂದಿ ಸೋಂಕಿನಿಂದ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಅಂಕಿ-ಅಂಶಗಳು ಸ್ಪಷ್ಟಪಡಿಸುತ್ತವೆ.

ಯುನೈಟೆಡ್ ಕಿಂಗ್‌ಡಮ್ ಆರೋಗ್ಯ ಸಂಸ್ಥೆ ನೀಡಿರುವ ಮಾಹಿತಿ ಪ್ರಕಾರ, ದೇಶದಲ್ಲಿ ಡಿಸೆಂಬರ್ 20ರ ವೇಳೆಗೆ 45,000ಕ್ಕೂ ಹೆಚ್ಚು ಓಮಿಕ್ರಾನ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈ ಪೈಕಿ 129 ರೋಗಿಗಳು ಆಸ್ಪತ್ರೆಗೆ ದಾಖಲಾಗಿದ್ದರೆ, ಮಹಾಮಾರಿಗೆ 14 ಮಂದಿ ಪ್ರಾಣ ಬಿಟ್ಟಿದ್ದಾರೆ. ಯುಕೆಯಲ್ಲಿ ವಾರದಿಂದ ವಾರಕ್ಕೆ ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ಶೇ.61ರಷ್ಟು ಏರಿಕೆ ಕಂಡು ಬಂದಿದ್ದು, ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆಯಲ್ಲಿ ಶೇ.6ರಷ್ಟು ಏರಿಕೆಯಾಗಿದೆ.

 

See also  ಯುರೋಪ್‌: ವೃದ್ಧನನ್ನು ಕೊಲೆ ಮಾಡಿ ಮೆದುಳು ಮತ್ತು ಅಂಗಾಂಗಗಳನ್ನು ತಿಂದ ವ್ಯಕ್ತಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12795
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು