News Kannada
Tuesday, October 04 2022

ವಿದೇಶ

ಟೆಕ್ಸಾಸ್: ಅಪ್ರಾಪ್ತನಿಂದ ಗುಂಡಿನ ದಾಳಿ, 3 ಸಾವು, ಹಲವರಿಗೆ ಗಾಯ - 1 min read

Photo Credit :

ಟೆಕ್ಸಾಸ್ : ಟೆಕ್ಸಾಸ್ ನ ಡಲ್ಲಾಸ್ ನಲ್ಲಿ ಅಪ್ರಾಪ್ತನೋರ್ವ ನಡೆಸಿದ ಗುಂಡಿನ ದಾಳಿಯಲ್ಲಿ ಕನಿಷ್ಠ ಮೂರು ಮಂದಿ ಸಾವನ್ನಪ್ಪಿದ್ದು ಹಲವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಅಮೆರಿಕದ ಟೆಕ್ಸಾಸ್ ರಾಜ್ಯದ ಡಲ್ಲಾಸ್ ನಲ್ಲಿ ವ್ಯಕ್ತಿಯೊಬ್ಬ ಗ್ಯಾಸ್ ಸ್ಟೇಷನ್ ಗೆ ನುಗ್ಗಿದ ದುಷ್ಕರ್ಮಿ ಮನಸೊ ಇಚ್ಚೆ ಗುಂಡುಹಾರಿಸಿದ ಪರಿಣಾಮ ಮೂವರು ಮೃತಪಟ್ಟು, ಮತ್ತೊಬ್ಬ ವ್ಯಕ್ತಿ ಗಾಯಗೊಂಡಿದ್ದಾರೆ.

ಡಲ್ಲಾಸ್​ನಲ್ಲಿ ಭಾನುವಾರ ರಾತ್ರಿ ನಡೆದ ಗುಂಡಿನ ದಾಳಿ ಘಟನೆ ಸಿಸಿಟಿವಿಯಲ್ಲಿ ವಿಡಿಯೋ ಸೆರೆಯಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಪೊಲೀಸರ ಪ್ರಕಾರ, ವ್ಯಕ್ತಿಯೊಬ್ಬ ಬಿಳಿ ಬಣ್ಣದ ಪಿಕಪ್ ಟ್ರಕ್‌ನಿಂದ ಹೊರಬಂದು, ಮಳೆಗೆ ನುಗ್ಗಿ ಅಲ್ಲಿದ್ದವರ ಮೇಲೆ ಗುಂಡು ಹಾರಿಸಿದ್ದಾನೆ.

ನಾಲ್ವರ ಮೇಲೆ ಆತ ಗುಂಡು ಹಾರಿಸಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಗೊಂಡ ಮತ್ತೊಬ್ಬ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ದಾಳಿಯಲ್ಲಿ ಮೃತಪಟ್ಟವರು ಹಾಗೂ ಗಾಯಾಳುಗಳ ಮಾಹಿತಿಯನ್ನು ಪೊಲೀಸರು ಬಹಿರಂಗಪಡಿಸಿಲ್ಲ. ಗುಂಡು ಹಾರಿಸಿದ ನಂತರ ದುಷ್ಕರ್ಮಿ ಬಂದಿದ್ದ ಟ್ರಕ್​ ಅನ್ನೇ ಹತ್ತಿ ಪರಾರಿಯಾಗಿದ್ದಾನೆ.

14ವರ್ಷದ ದುಷ್ಕರ್ಮಿ ಬಂಧನ
ಇನ್ನು ಕೂಡಲೇ ಕಾರ್ಯಾಚರಣೆ ನಡೆಸಿದ ಡಲ್ಲಾಸ್ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ದುಷ್ಕರ್ಮಿಯನ್ನು ಬಂಧಿಸಿದ್ದಾರೆ. ಬಂಧಿತನನ್ನು 14 ವರ್ಷ ಕ್ಸೇವಿಯಲ್ ಗೊಂಜಾಲೇಜ್ ಎಂದು ಗುರುತಿಸಲಾಗಿದೆ. ಈ ಕುರಿತು ಟ್ವೀಟ್ ಮಾಡಿರುವ ಗಾರ್ಲಾಂಡ್ ಪೊಲೀಸರು ಮಾಹಿತಿ ನೀಡಿದ್ದಾರೆ.

See also  ಕೆನಡಾದಲ್ಲಿನ ಚಳಿಯ ತೀವ್ರತೆಗೆ ನಾಲ್ವರು ಭಾರತೀಯರು ಬಲಿ!
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 2 / 5. Vote count: 1

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು