News Kannada
Saturday, November 26 2022

ವಿದೇಶ

ಕೋವಿಡ್‌ ಕಠಿಣ ನಿಯಮ: ಸ್ವಂತ ಮದುವೆಯನ್ನೇ ರದ್ಧುಗೊಳಿಸಿದ ನ್ಯೂಜಿಲೆಂಡ್‌ ಪ್ರಧಾನಿ ಜೆಸಿಂದಾ ಆರ್ಡೆನ್‌ - 1 min read

Photo Credit :

ವೆಲ್ಲಿಂಗ್ಟನ್‌: ಓಮೈಕ್ರಾನ್‌ ಪ್ರಕರಣಗಳು ಹೆಚ್ಚಿದಂತೆ ಕೋವಿಡ್‌ ನಿಯಮಗಳನ್ನು ಕಠಿಣಗೊಳಿಸಿರುವ ನ್ಯೂಜಿಲೆಂಡ್‌ನ ಪ್ರಧಾನಿ ಜೆಸಿಂದಾ ಆರ್ಡೆನ್‌ ಅವರು ಸ್ವಂತ ಮದುವೆಯನ್ನೇ ರದ್ಧುಗೊಳಿಸಿದ್ದಾರೆ.

ನ್ಯೂಜಿಲೆಂಡ್‌ನಲ್ಲಿ ಕೋವಿಡ್ ನಿಯಮಗಳನ್ನು ಮತ್ತಷ್ಟು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದ್ದು, ವಿವಾಹ ಸಮಾರಂಭಕ್ಕೆ ಪೂರ್ಣವಾಗಿ ಲಸಿಕೆ ಪಡೆದ 100 ಮಂದಿಗೆ ಭಾಗವಹಿಸಲು ಅವಕಾಶ ನೀಡಲಾಗಿದೆ.

‘ನನ್ನ ವಿವಾಹವು ಮುಂದಿನ ದಿನಗಳಲ್ಲಿ ನಡೆಯುವುದಿಲ್ಲ’ ಎಂದು ಜೆಸಿಂದಾ ಭಾನುವಾರ ಸ್ಪಷ್ಟಪಡಿಸಿದ್ದಾರೆ.ದೀರ್ಘಕಾಲದ ಜೊತೆಗಾರ ಕ್ಲಾರ್ಕ್‌ ಗೆಫಾರ್ಡ್‌ ಅವರ ಜೊತೆ ಆರ್ಡೆನ್ ಅವರ ವಿವಾಹವನ್ನು ಮುಂದಿನ ವಾರಗಳಲ್ಲಿ ನಿಶ್ಚಯಿಸಲಾಗಿತ್ತು. ಆದರೆ ದಿನಾಂಕವನ್ನು ಘೋಷಿಸಲಾಗಿರಲಿಲ್ಲ.

ಕೋವಿಡ್‌ ಕಠಿಣ ನಿಯಮಗಳ ಹೇರಿಕೆಯಿಂದ ತಮ್ಮ ಮದುವೆ ರದ್ಧುಗೊಂಡ ಬಗೆಗಿನ ಪ್ರಶ್ನೆಗೆ ‘ಜೀವನ ಎಂದರೆ ಹೀಗೆಯೇ’ ಎಂದು ಜೆಸಿಂದಾ ಉತ್ತರಿಸಿದ್ದಾರೆ.

‘ಸೋಂಕಿನಿಂದ ಹೆಚ್ಚು ಸಂಕಷ್ಟಕ್ಕೆ ಒಳಗಾದ ನ್ಯೂಜಿಲೆಂಡ್‌ ಸಾವಿರಾರು ಮಂದಿಯಲ್ಲಿ ನಾನೂ ಒಬ್ಬಳು. ಅದರಲ್ಲಿ ಯಾವುದೇ ವ್ಯತ್ಯಾಸವಿಲ್ಲ. ಗಂಭೀರ ಕಾಯಿಲೆಯಿಂದ ಬಳಲುತ್ತಿರುವ ಪ್ರೀತಿ ಪಾತ್ರರ ಜೊತೆಗೆ ಇರಲಾಗದೆ ಇರುವ ಸ್ಥಿತಿ ಕರುಳು ಹಿಂಡುವಂತದ್ದಾಗಿದೆ’ ಎಂದರು.

ನ್ಯೂಜಿಲೆಂಡ್‌ನಲ್ಲಿ ಇದುವರೆಗೆ 15,104 ಕೋವಿಡ್‌ 19 ಪ್ರಕರಣಗಳು ವರದಿ ಆಗಿವೆ. 52 ಮಂದಿ ಕೋವಿಡ್‌ ಕಾರಣದಿಂದ ಮೃತರಾಗಿದ್ದಾರೆ. ಕಳೆದ 2 ವರ್ಷಗಳಿಂದ ಗಡಿಯಲ್ಲಿ ಕಠಿಣ ನಿಯಮಗಳನ್ನು ಪಾಲಿಸಲಾಗುತ್ತಿದೆ.

See also  ದೇಶದಲ್ಲಿ 422 ಜನರಲ್ಲಿ ಒಮಿಕ್ರಾನ್ ಸೋಂಕು ದೃಢ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12795
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು