News Kannada
Friday, October 07 2022

ವಿದೇಶ

‘ಉಕ್ರೇನ್’ನಲ್ಲಿ ‘ಕದನ ವಿರಾಮ’ ಘೋಷಿಸಿದ ‘ರಷ್ಯಾ - 1 min read

Photo Credit :

ಉಕ್ರೇನ್‌: ಕಳೆದ 10 ದಿನಗಳಿಂದ ಉಕ್ರೇನ್‌ ಮೇಲೆ ಯುದ್ದ ಆರಂಭಿಸಿರುವ ರಷ್ಯಾ ಇಂದು ಕದನ ವಿರಾಮ ಘೋಷಿಸಿದೆ.ಸಂಪೂರ್ಣ ಉಕ್ರೇನ್‌ ನಲ್ಲಿ ಕದನ ವಿರಾಮ ಘೋಷಣೆ ಮಾಡಲಾಗಿದ್ದು, 6 ಗಂಟೆಯಿಂದ ಇದು ಜಾರಿಗೆ ಬಂದಿದೆ.

ಅಲ್ಲಿನ ನಾಗರಿಕರು ಸುರಕ್ಷಿತ ಸ್ಥಳಗಳಿಗೆ ತೆರಳಲು ಅನುವಾಗುವಂತೆ ಈ ಕದನ ವಿರಾಮ ಘೋಷಣೆ ಮಾಡಲಾಗಿದೆ ಎನ್ನಲಾಗಿದೆ.ರಷ್ಯಾದ ಈ ನಡೆ ವಿಶ್ವವನ್ನು ಅಚ್ಚರಿಗೊಳಿಸಿದ್ದು, ಏಕಾಏಕಿ ಕದನ ವಿರಾಮ ಘೋಷಿಸಿರುವುದರಿಂದ ಈಗಾಗಲೇ ಉಕ್ರೇನ್‌ ನ್ನು ರಷ್ಯಾ ತನ್ನ ಕೈ ವಶ ಮಾಡಿಕೊಂಡಿದೆಯಾ ಎಂಬ ಅನುಮಾನ ಮೂಡಿದೆ.

ಕೆಲವೊಂದು ಮೂಲಗಳ ಪ್ರಕಾರ ಉಕ್ರೇನ್‌ ನಲ್ಲಿ ಸಿಲುಕಿಕೊಂಡಿರುವ ವಿದೇಶ ಪ್ರಜೆಗಳ ಸುರಕ್ಷಿತ ತೆರವಿಗೆ ಒತ್ತಡ ಹೆಚ್ಚಾದ ಕಾರಣ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗಿದೆ. ಅಲ್ಲದೇ 10 ದಿನಗಳಾಗುತ್ತಾ ಬಂದರೂ ರಷ್ಯಾ ಸೈನಿಕರಿಗೆ ಉಕ್ರೇನ್‌ ನ ಪ್ರಮುಖ ನಗರಗಳನ್ನು ವಶಪಡಿಸಿಕೊಳ್ಳಲು ಸಾಧ್ಯವಾಗದ ಹಿನ್ನಲೆಯಲ್ಲಿ ರಷ್ಯಾ ಈ ನಿರ್ಧಾರ ಕೈಗೊಂಡಿರಬಹುದು ಎಂಬ ಮಾತುಗಳು ಕೇಳಿ ಬರುತ್ತಿವೆ.

See also  ಚೀನಾದ ದೊಡ್ಡ ನಗರಗಳಲ್ಲಿ ಲಾಕ್ ಡೌನ್ ಘೋಷಣೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12795
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು