News Kannada
Wednesday, February 08 2023

ವಿದೇಶ

ಡ್ಯಾನಿಶ್ ಸಿದ್ಧಿಕಿ ಸೇರಿ ನಾಲ್ಕು ಭಾರತೀಯರಿಗೆ ಪುಲಿಟ್ಜರ್ ಪ್ರಶಸ್ತಿ

Photo Credit :

 ನ್ಯೂಯಾರ್ಕ್: ಅಫ್ಗಾನಿಸ್ತಾನದಲ್ಲಿ ಹತ್ಯೆಗೀಡಾಗಿದ್ದ ಫೋಟೋ ಜರ್ನಲಿಸ್ಟ್ ಡ್ಯಾನಿಶ್ ಸಿದ್ದಿಕಿ ಸೇರಿ ನಾಲ್ವರು ಭಾರತೀಯರಿಗೆ 2022ನೇ ಸಾಲಿನ ಪುಲಿಟ್ಜರ್ ಪ್ರಶಸ್ತಿ ದೊರೆತಿದೆ.

ಕಳೆದ ವರ್ಷ ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಮತ್ತು ಸರ್ಕಾರಿ ವಿಶೇಷ ಪಡೆಗಳ ಮಧ್ಯೆ ನಡೆದ ಸಂಘರ್ಷ ವೇಳೆ ಬಲಿಯಾಗಿದ್ದ ಫೋಟೋ ಜರ್ನಲಿಸ್ಟ್ ಡ್ಯಾನಿಶ್ ಸಿದ್ದಿಕಿ ಅವರಿಗೆ ಮರಣೋತ್ತರ ಪ್ರಶಸ್ತಿ ಲಭಿಸಿದೆ.

ಎರಡನೇ ಬಾರಿಗೆ ಸಿದ್ದಿಕಿ ಪುಲಿಟ್ಜರ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಸಿದ್ದಿಕಿ ಅವರು ಕಳೆದ ವರ್ಷ ಅಫ್ಘಾನಿಸ್ತಾನದ ಕಂದಹಾರ್ ನಗರದ ಸ್ಪಿನ್ ಬೋಲ್ಡಾಕ್ ಜಿಲ್ಲೆಯಲ್ಲಿ ಆಫ್ಘನ್ ಪಡೆಗಳು ಮತ್ತು ತಾಲಿಬಾನ್ ನಡುವಿನ ಘರ್ಷಣೆ ವರದಿ ಮಾಡುವಾಗ ಹತ್ಯೆಗೀಡಾಗಿದ್ದರು.

ರೋಹಿಂಗ್ಯಾ ಬಿಕ್ಕಟ್ಟಿನ ವರದಿಗಾಗಿ ಅವರು ರಾಯಿಟರ್ಸ್ ತಂಡದ ಭಾಗವಾಗಿ 2018ರಲ್ಲಿ ಪ್ರತಿಷ್ಠಿತ ಪ್ರಶಸ್ತಿಯನ್ನು ಪಡೆದಿದ್ದರು. ಅಫ್ಘಾನಿಸ್ತಾನದ ಸಂಘರ್ಷ, ಹಾಂಗ್‌ ಕಾಂಗ್ ಪ್ರತಿಭಟನೆಗಳು ಮತ್ತು ಏಷ್ಯಾ, ಮಧ್ಯಪ್ರಾಚ್ಯ ಮತ್ತು ಯುರೋಪ್‌ನಲ್ಲಿ ಇತರ ಪ್ರಮುಖ ಘಟನೆಗಳನ್ನು ವ್ಯಾಪಕವಾಗಿ ಕವರ್ ಮಾಡಿದ್ದರು.

ಭಾರತದಲ್ಲಿ ಕೋವಿಡ್-19 ಚಿತ್ರಣವನ್ನು ಮನಮುಟ್ಟುವಂತೆ ಕ್ಯಾಮರಾದಲ್ಲಿ ಸೆರೆಹಿಡಿದಿದ್ದ ರಾಯಿಟರ್ಸ್ ಸುದ್ದಿ ಸಂಸ್ಥೆಯ ವಿಡಿಯೋ ಜರ್ನಲಿಸ್ಟ್‌ಗಳಿಗೆ ಈ ಸಾಲಿನ ಪ್ರಶಸ್ತಿ ಸಿಕ್ಕಿದೆ. ಈ ತಂಡದಲ್ಲಿ ಡ್ಯಾನಿಶ್ ಸಿದ್ದಿಕಿ ಜತೆಗೆ ಅದ್ನಾನ್ ಅಬಿದಿ, ಸಾನ್ನಾ ಇರ್ಷದ್ ಮಟ್ಟೂ ಮತ್ತು ಅಮಿತ್ ದಾವೆ ಕೂಡ ಇದ್ದಾರೆ.

See also  ಪಾಕಿಸ್ತಾನದಲ್ಲಿ ಟಿಕ್ ಟಾಕ್ ಸೇವೆ ಪುನರಾರಂಭ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು