News Kannada
Monday, February 06 2023

ವಿದೇಶ

ಶ್ರೀಲಂಕಾ ಮಾಜಿ ಪ್ರಧಾನಿ ಮಹಿಂದಾ ರಾಜಪಕ್ಸ ದೇಶ ತೊರೆಯುವಂತಿಲ್ಲ: ನ್ಯಾಯಾಲಯ ನಿರ್ಬಂಧ

Photo Credit :

ಕೊಲಂಬೊ: ಶ್ರೀಲಂಕಾ ರಾಜಧಾನಿ ಕೊಲಂಬೊದಲ್ಲಿ ಇತ್ತೀಚೆಗಷ್ಟೇ ಸರ್ಕಾರಿ ವಿರೋಧಿ ಪ್ರತಿಭಟನಕಾರರ ಮೇಲೆ ನಡೆದ ದಾಳಿಗಳ ಹಿನ್ನೆಲೆಯಲ್ಲಿ ತನಿಖೆ ಎದುರಿಸುತ್ತಿರುವ ಮಾಜಿ ಪ್ರಧಾನಿ ಮಹಿಂದಾ ರಾಜಪಕ್ಸ, ಅವರ ಪುತ್ರ ನಮಲ್ ರಾಜಪಕ್ಸ ಹಾಗೂ ಇತರ 15 ಮಂದಿ ದೇಶಬಿಟ್ಟು ಹೋಗದಂತೆ ಸ್ಥಳೀಯ ನ್ಯಾಯಾಲಯವೊಂದು ನಿರ್ಬಂಧ ಹೇರಿದೆ.

‘ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ದಾಳಿ ನಡೆಸಿದ ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದೆ. ಈ ಘಟನೆಗೆ ಮಹಿಂದಾ ರಾಜಪಕ್ಸ ಸೇರಿದಂತೆ 17 ಮಂದಿ ಸಂಚು ರೂಪಿಸಿ, ಈ ದಾಳಿಗಳನ್ನು ಯೋಜಿಸಿದಂತೆ ಕಾಣುತ್ತಿದೆ. ಈ ಹಿನ್ನೆಲೆಯಲ್ಲಿ ಮಹಿಂದಾ ರಾಜಪಕ್ಸ ಸೇರಿದಂತೆ 17 ಮಂದಿ ಹೊರದೇಶಗಳಿಗೆ ಪ್ರಯಾಣಿಸದಂತೆ ನಿರ್ಬಂಧ ಹೇರಬೇಕು’ ಎಂದು ಅಟಾರ್ನಿ ಜನರಲ್ ಕೋರಿದ್ದರು.

ಈ ಹಿನ್ನೆಲೆಯಲ್ಲಿ ಫೋರ್ಟ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು, ಈ ನಿರ್ಬಂಧ ಹೇರಿದೆ ಎಂದು ವರದಿಯಾಗಿದೆ.

See also  ಅನಾವರಣಗೊಂಡ ಕೆಲವೇ ಗಂಟೆಗಳಲ್ಲಿ ಗಾಂಧೀಜಿ ಪ್ರತಿಮೆ ಧ್ವಂಸ: ಇದು ಅವಮಾನಕರ ಎಂದ ಆಸ್ಟ್ರೇಲಿಯಾ ಪ್ರಧಾನಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12790
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು