News Kannada
Friday, February 03 2023

ವಿದೇಶ

ಉತ್ತರ ಕೊರಿಯಾ:  ಮೊದಲ ಬಾರಿ ಕೊರೋನಾ ರೂಪಾಂತರಿ, ಆರು ಮಂದಿ ಮೃತ

Photo Credit :

ಉತ್ತರ ಕೊರಿಯಾ:  ಮೊದಲ ಬಾರಿಗೆ ಕೊರೋನಾ ರೂಪಾಂತರಿ ಒಮಿಕ್ರಾನ್‌ ದೃಢಪಟ್ಟಿದ್ದು, ಆರು ಮಂದಿ ಮೃತಪಟ್ಟಿದ್ದಾರೆ ಎಂದು ಸರ್ಕಾರಿ ಸುದ್ದಿಸಂಸ್ಥೆ ಕೆಸಿಎನ್‌ಎ ಶುಕ್ರವಾರ ವರದಿ ಮಾಡಿದೆ.

ಮೃತಪಟ್ಟಿರುವ ಆರು ಜನರ ಪೈಕಿ ಒಬ್ಬ ವ್ಯಕ್ತಿಗೆ ಕೋವಿಡ್‌ ದೃಢಪಟ್ಟಿತ್ತು. ಉಳಿದವರೂ ಜ್ವರದಿಂದ ಬಳಲುತ್ತಿದ್ದರು, ಆದರೆ ಇವರ ಪೈಕಿ ಎಷ್ಟು ಜನರಿಗೆ ಕೋವಿಡ್‌ ದೃಢಪಟ್ಟಿತ್ತು ಎಂಬುದು ಸದ್ಯಕ್ಕೆ ತಿಳಿದುಬಂದಿಲ್ಲ .

ದೇಶದಾದ್ಯಂತ ಜ್ವರ ದಿಢೀರ್‌ನೆ ವ್ಯಾಪಕವಾಗುತ್ತಿದ್ದು, ಈ ಸಂಬಂಧ 3.50 ಲಕ್ಷ ಮಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ. ದೇಶದಲ್ಲಿ ಕೋವಿಡ್ ಪರೀಕ್ಷೆಗಳು ನಡೆಯುತ್ತಿಲ್ಲ. ಹೀಗಾಗಿ ಈಗ ದಿಢೀರ್‌ನೆ ವ್ಯಾಪಕವಾಗುತ್ತಿರುವ ಜ್ವರಕ್ಕೆ ಕಾರಣಗಳೇನು ಎಂಬುದು ತಿಳಿದು ಬಂದಿಲ್ಲ ಎಂದು ತಜ್ಞರು ಹೇಳಿದ್ದಾರೆ.

ಕೋವಿಡ್‌ನ ಮೊದಲ ಪ್ರಕರಣ ಪತ್ತೆಯಾದ ಹಿನ್ನೆಲೆಯಲ್ಲಿ ಉತ್ತರ ಕೊರಿಯಾದಲ್ಲಿ ಗುರುವಾರ ರಾಷ್ಟ್ರವ್ಯಾಪಿ ಲಾಕ್‌ಡೌನ್‌ ಘೋಷಿಸಲಾಗಿತ್ತು.

See also  ಒಮಿಕ್ರಾನ್ ಆತಂಕ: ಯುಎಇ ಪ್ರವಾಸ ರದ್ದುಗೊಳಿಸಿದ ಪ್ರಧಾನಿ ಮೋದಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು