News Kannada
Tuesday, July 05 2022

ವಿದೇಶ

ದಕ್ಷಿಣ ಚೀನಾದಲ್ಲಿ ಭಾರಿ ಮಳೆ: 15 ಸಾವು - 1 min read

Photo Credit :

ಬೀಜಿಂಗ್: ದಕ್ಷಿಣ ಚೀನಾದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ಸಂಬಂಧಿತ ಅವಘಡಗಳಲ್ಲಿ ಕನಿಷ್ಠ 15 ಮಂದಿ ಮೃತಪಟ್ಟಿದ್ದಾರೆ ಹಾಗೂ ಮೂವರು ನಾಪತ್ತೆಯಾಗಿದ್ದಾರೆ.

ಚೀನಾದ ಪೂರ್ವ ಕರಾವಳಿಯ ಫುಜಿಯಾನ್ ಪ್ರಾಂತ್ಯದಲ್ಲಿ ಮಳೆಯಿಂದ ಭೂಕುಸಿತ ಉಂಟಾಗಿದ್ದು, 2 ಕಟ್ಟಡಗಳು ಉರುಳಿಬಿದ್ದಿವೆ.

ಈ ಘಟನೆಗಳಲ್ಲಿ 8 ಮಂದಿ ಮೃತಪಟ್ಟಿದ್ದಾರೆ. ಅಲ್ಲದೆ, ಯುನ್ನನ್ ಪ್ರಾಂತ್ಯದಲ್ಲಿ ಐವರು ಮೃತಪಟ್ಟಿದ್ದು, ಮೂವರು ನಾಪತ್ತೆಯಾಗಿದ್ದಾರೆ ಎಂದು ಸರ್ಕಾರಿ ಸ್ವಾಮ್ಯದ ಸುದ್ದಿ ಸಂಸ್ಥೆ ‘ಸಿಸಿಟಿವಿ’ ವರದಿ ಮಾಡಿದೆ.

ಇನ್ನು ಗುವಾಂಗ್‌ಕ್ವಿ ಪ್ರಾಂತ್ಯದ ಕ್ಸಿಂಚೆಂಗ್ ಕೌಂಟಿಯಲ್ಲಿ ಶುಕ್ರವಾರ ಪ್ರವಾಹದ ನೀರಿನಲ್ಲಿ ಕೊಚ್ಚಿಹೋದ ಮೂವರು ಮಕ್ಕಳ ಪೈಕಿ ಇಬ್ಬರು ಮೃತಪಟ್ಟಿದ್ದು, ಒಂದು ಮಗುವನ್ನು ರಕ್ಷಿಸಲಾಗಿದೆ.

ಯುನ್ನಾನ್‌ನ ಕ್ಯುಬೆ ಕೌಂಟಿಯಲ್ಲಿ ಸುರಿದ ಭಾರಿ ಮಳೆಯಿಂದಾಗಿ ರಸ್ತೆಗಳು, ಸೇತುವೆಗಳು, ದೂರಸಂಪರ್ಕಗಳು ಮತ್ತು ವಿದ್ಯುತ್ ಸೌಕರ್ಯಗಳಿಗೆ ಹಾನಿಯಾಗಿದೆ. ಚೀನಾದ ಹಲವು ಭಾಗಗಳಲ್ಲಿ ಗುರುವಾರದಿಂದ ಭಾರಿ ಪ್ರಮಾಣದ ಮಳೆ ಸುರಿಯುತ್ತಿದೆ.

See also  ಕರೋನಾದಿಂದ ಗುಣಪಟ್ಟವರ ಬುದ್ಧಿ ಶಕ್ತಿ ಕ್ಷೀಣಿಸುವ ಸಾಧ್ಯತೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

1616
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು