ಇಸ್ಲಾಮಾಬಾದ್: ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಸರ್ಗೋಧಾ ಜಿಲ್ಲೆಯಲ್ಲಿ ಬುಧವಾರ ಬೆಳಿಗ್ಗೆ ಪ್ರಯಾಣಿಕ ಬಸ್ಸೊಂದು ಬೈಕ್ ಮತ್ತು ರಿಕ್ಷಾಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಐದು ಮಂದಿ ಮೃತಪಟ್ಟು, ಇನ್ನಿಬ್ಬರು ಗಾಯಗೊಂಡಿದ್ದಾರೆ.
ಜಿಲ್ಲೆಯ ಖುಷಬ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಬಸ್ ಚಾಲಕ ಮೋಟಾರ್ ಸೈಕಲ್ ಅನ್ನು ಹಾದುಹೋಗಲು ಪ್ರಯತ್ನಿಸಿದಾಗ ಎದುರಿನಿಂದ ಬರುತ್ತಿದ್ದ ರಿಕ್ಷಾಕ್ಕೆ ಡಿಕ್ಕಿ ಹೊಡೆದಿದೆ. ಎಂದು ಪೊಲೀಸರನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿದೆ.
ರಿಕ್ಷಾದಲ್ಲಿದ್ದ ಐದು ಜನರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ, ಬಸ್ ಚಾಲಕನ ನಿರ್ಲಕ್ಷ್ಯದಿಂದ ಅಪಘಾತ ಸಂಭವಿಸಿದೆ. ಬಸ್ ಅನ್ನು ವಶಕ್ಕೆ ತೆಗೆದುಕೊಳ್ಳುವಾಗ ಬಸ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.