ಸಿಡ್ನಿ: ಆಸ್ಟ್ರೇಲಿಯಾದ ಕ್ಯಾನ್‌ಬೆರಾ ಏರ್ಪೋರ್ಟ್ನಲ್ಲಿ ಗುಂಡಿನ ದಾಳಿ ನಡೆದಿದ್ದು, ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ಗುಂಡಿನ ದಾಳಿಯ ನಂತರ ವಿಮಾನಗಳನ್ನು ಸ್ಥಗಿತಗೊಳಿಸಲಾಗಿದೆ ಮತ್ತು ಟರ್ಮಿನಲ್ ಅನ್ನು ಸ್ಥಳಾಂತರಿಸಲಾಗಿದೆ ಎಂದು ತಿಳಿದು ಬಂದಿದೆ. ಅದೃಷ್ಟವಶಾತ್ ಈ ಘಟನೆಯಲ್ಲಿ ಯಾರಿಗೂ ಹಾನಿಯಾಗಿಲ್ಲ
ಮುನ್ನೆಚ್ಚರಿಕೆ ಕ್ರಮವಾಗಿ ಕ್ಯಾನ್‌ಬೆರಾ ವಿಮಾನ ನಿಲ್ದಾಣದ ಟರ್ಮಿನಲ್‌ನಿಂದ ತೆರವು ಮಾಡಲಾಗಿದ್ದು, ವಿಮಾನ ನಿಲ್ದಾಣದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಆದರೆ ಈ ಸಮಯದಲ್ಲಿ ವಿಮಾನ ನಿಲ್ದಾಣಕ್ಕೆ ಬರದಂತೆ ಎಸಿಟಿ ಪೊಲೀಸರು ಸಾರ್ವಜನಿಕರಿಗೆ ತಿಳಿಸಿದ್ದಾರೆ.