News Kannada
Friday, December 09 2022

ವಿದೇಶ

ಗಾಜಾ: ವಸತಿ ಕಟ್ಟಡವೊಂದರಲ್ಲಿ ಅಗ್ನಿ ದುರಂತ, 21 ಸಾವು

Three killed in blast near Trinamool Congress MP's ancestral home
Photo Credit : Pixabay

ಗಾಜಾ: ಉತ್ತರ ಗಾಜಾ ಪಟ್ಟಿಯ ವಸತಿ ಕಟ್ಟಡವೊಂದರಲ್ಲಿ ಸಂಭವಿಸಿದ ಭಾರಿ ಅಗ್ನಿ ದುರಂತದಲ್ಲಿ ಏಳು ಮಕ್ಕಳು ಸೇರಿದಂತೆ ಕನಿಷ್ಠ 21 ಮಂದಿ ಪ್ಯಾಲೆಸ್ತೀನಿಯರು ಮೃತಪಟ್ಟಿದ್ದು, 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಭದ್ರತಾ ಮತ್ತು ವೈದ್ಯಕೀಯ ಮೂಲಗಳು ತಿಳಿಸಿವೆ.

ಗಾಯಗೊಂಡವರಲ್ಲಿ ಕೆಲವರು ಗಂಭೀರ ಸ್ಥಿತಿಯಲ್ಲಿದ್ದು, ಜಬಾಲಿಯಾ ನಿರಾಶ್ರಿತರ ಶಿಬಿರದ ತಾಲ್-ಜತಾರ್ ಪ್ರದೇಶದಲ್ಲಿ ಗುರುವಾರ ಸಂಭವಿಸಿದ ಬೆಂಕಿಯಲ್ಲಿ ಸಾವಿನ ಸಂಖ್ಯೆ ಹೆಚ್ಚಾಗುವ ನಿರೀಕ್ಷೆಯಿದೆ ಎಂದು ಇಂಡೋನೇಷ್ಯಾ ಆಸ್ಪತ್ರೆಯ ನಿರ್ದೇಶಕ ಸಲಾಹ್ ಅಬು ಲೈಲಾ ಅವರನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿದೆ.

ರಕ್ಷಣಾ ತಂಡಗಳು ಮತ್ತು ಹಲವಾರು ಭದ್ರತಾ ಸಿಬ್ಬಂದಿಯನ್ನು ಘಟನಾ ಸ್ಥಳಕ್ಕೆ ಕಳುಹಿಸಲಾಗಿದೆ ಎಂದು ಪ್ಯಾಲೆಸ್ತೀನ್ ನಾಗರಿಕ ರಕ್ಷಣಾ ಇಲಾಖೆ ಹೇಳಿಕೆಯಲ್ಲಿ ತಿಳಿಸಿದೆ.

ಬೆಂಕಿಯನ್ನು ನಿಯಂತ್ರಿಸಲು ಆಂಬ್ಯುಲೆನ್ಸ್  ಮತ್ತು ನಾಗರಿಕ ರಕ್ಷಣಾ ಸಿಬ್ಬಂದಿ ಈಗಾಗಲೇ ಗಂಟೆಗಳ ಕಾಲ ಕೆಲಸ ಮಾಡಿದ್ದಾರೆ ಎಂದು ಪ್ಯಾಲೆಸ್ಟೀನ್ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಕಟ್ಟಡದ ಒಳಗೆ ಸಂಗ್ರಹಿಸಲಾದ ಹೆಚ್ಚಿನ ಪ್ರಮಾಣದ ಇಂಧನವು ಬೆಂಕಿಗೆ ಕಾರಣವಾಗಿರಬಹುದು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಗಾಜಾದ ಆಂತರಿಕ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

See also  ಬೆಳ್ತಂಗಡಿ: ಶ್ರೀ ಗುರು ನಾರಾಯಣ ಸಂಘದ ವತಿಯಿಂದ ಹೆಗ್ಗಡೆಯವರಿಗೆ ಗೌರವ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

30409

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು