ಇಸ್ಲಾಮಾಬಾದ್: ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಪ್ರಯಾಣಿಕರ ಬಸ್ ಮತ್ತು ಟ್ರಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕನಿಷ್ಠ ಏಳು ಮಂದಿ ಮೃತಪಟ್ಟಿದ್ದು, ಇತರ 20 ಮಂದಿ ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ವರದಿಗಳ ಪ್ರಕಾರ, ಟೊರೊಸಾಕಿ ಪ್ರದೇಶದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಮಧ್ಯರಾತ್ರಿ ಅಪಘಾತ ಸಂಭವಿಸಿದೆ. ಮೃತರು ಮತ್ತು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗಾಯಗೊಂಡವರಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಆಸ್ಪತ್ರೆಯ ಸಿಬ್ಬಂದಿ ಸ್ಥಳೀಯ ಮಾಧ್ಯಮಗಳಿಗೆ ತಿಳಿಸಿದ್ದಾರೆ.